ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದ ಆಸಿಯಾ

Last Updated 23 ಅಕ್ಟೋಬರ್ 2021, 5:45 IST
ಅಕ್ಷರ ಗಾತ್ರ

ಮಂಗಳೂರು: ‘ನನ್ನನ್ನು ಪತಿ ಸ್ವೀಕರಿಸಿ, ಅವರ ಮನೆಗೆ ಸೇರಿಸಿಕೊಳ್ಳಬೇಕೆಂದು ಎರಡು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ಯಾವುದೇ ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದು ನನ್ನಿಷ್ಟದಂತೆ ಜೀವಿಸಲು ತೀರ್ಮಾನಿಸಿದ್ದೇನೆ’ ಎಂದು ಆಸಿಯಾ ಇಬ್ರಾಹೀಂ ಖಲೀಲ್ ಕಟ್ಟೆಮಾರ್ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೋರಾಟದಲ್ಲಿ ಜಾತಿ, ಮತದ ಭೇದವಿಲ್ಲದೆ ಎಲ್ಲರೂ ಸಹಕರಿಸಿದ್ದಾರೆ. ಹೋರಾಟಕ್ಕೆ ನ್ಯಾಯ ಸಿಗದ ಅಸಮಾಧಾನ ಇದ್ದರೂ, ಮುಂದೆ ಸುಖವಾದ ಜೀವನ ಸಾಗಿಸಲು ನಿರ್ಧರಿಸಿದ್ದೇನೆ’ ಎಂದರು.

‘ಮುಂದಿನ ದಿನಗಳಲ್ಲಿ ಯಾವುದೇ ರಾಜಕೀಯ ಪಕ್ಷವಾಗಲಿ, ಧರ್ಮದ ಪ್ರತಿನಿಧಿ ಅಥವಾ ಯಾವುದೇ ಜಾತಿಯ ಸಂಘ ಸಂಸ್ಥೆಗಳಾಗಲಿ ನನ್ನ ಪರವಾಗಿ ಅಥವಾ ವಿರುದ್ಧವಾಗಿ ಯಾವುದೇ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ಗೊಂದಲ ಉಂಟು ಮಾಡಬಾರದು’ ಎಂದು ವಿನಂತಿಸಿದರು.

ಮುಂದಿನ ದಿನಗಳಲ್ಲಿ ನನ್ನ ಯಾವುದೇ ವಿಷಯಕ್ಕೆ ಇಬ್ರಾಹೀಂ ಖಲೀಲ್ ಕಟ್ಟೆಮಾರ್ ಮತ್ತು ಅವರ ಕುಟುಂಬಕ್ಕೆ ಸಂಬಂಧ ಇರುವುದಿಲ್ಲ. ಅವರ ಪರವಾಗಿ ಅಥವಾ ವಿರುದ್ಧವಾಗಿ ಯಾವುದೇ ಹೇಳಿಕೆಯನ್ನು ಸಾಮಾಜಿಕ ಜಾಲತಾಣ, ಮಾಧ್ಯಮದಲ್ಲಿ ನೀಡುವುದಿಲ್ಲ. ನಮ್ಮ ನಡುವೆ ಈ ಮೊದಲು ಪೊಲೀಸ್ ಠಾಣೆಯಲ್ಲಿ ಮತ್ತು ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣವನ್ನು ಸ್ವ ಇಚ್ಛೆಯಿಂದ ಹಿಂಪಡೆಯುವೆ’ ಎಂದು ತಿಳಿಸಿದರು.

‘ಷರಿಯತ್ ಕಾನೂನಿನ ಪ್ರಕಾರ ನಾನು ವಿವಾಹವಾಗಿದ್ದು, ಮುಂದೆ ನನ್ನಂತೆ ನೊಂದ ಮಹಿಳೆಯರಿಗೆ ನೆರವು ನೀಡುವ ನಿಟ್ಟಿನಲ್ಲಿ ಕಾರ್ಯ ಮುಂದುವರಿಸುತ್ತೇನೆ’ ಎಂದರು. ಸುಳ್ಯ ನಗರ ಪಂಚಾಯಿತಿ ಸದಸ್ಯ ಉಮ್ಮರ್, ಇಬ್ರಾಹಿಂ ಕತ್ತಾರ್, ಅಬ್ದುಲ್ ಲತೀಫ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT