ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು | ಹಲ್ಲೆ ನಡೆಸಿ ಜೀವ ಬೆದರಿಕೆ: ದೂರು

Published 30 ಮಾರ್ಚ್ 2024, 14:13 IST
Last Updated 30 ಮಾರ್ಚ್ 2024, 14:13 IST
ಅಕ್ಷರ ಗಾತ್ರ

ಪುತ್ತೂರು: ಕಾರೊಂದರಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ತಂದೆ, ಮಗನನ್ನು ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಸಮೀಪದ ಮಣ್ಣಾಪು ಎಂಬಲ್ಲಿ ನಡೆದಿದ್ದು, ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಜುಬೇರ್ ಅವರು ಘಟನೆ ಕುರಿತು ದೂರು ನೀಡಿದ್ದಾರೆ. ‘ಮಾರ್ಚ್‌ 28ರಂದು ರಾತ್ರಿ ವೇಳೆ ನಾನು, ತಂದೆ ಆದಂ ಅವರೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ತಿಂಗಳಾಡಿಯ ಸಿದ್ದಿಕ್ ಅನ್ಸಾರ್ ಮತ್ತು ಕೆಮ್ಮಿಂಜೆ ಗ್ರಾಮದ ಶಮೀರ್ ಕಾರೊಂದರಲ್ಲಿ ಬಂದು ನಮ್ಮಿಬ್ಬರನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT