ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ತೂರು | ಬೇಲಿ ವಿಚಾರದ ತಕರಾರು: ಹಲ್ಲೆ

Published 7 ಮೇ 2024, 13:03 IST
Last Updated 7 ಮೇ 2024, 13:03 IST
ಅಕ್ಷರ ಗಾತ್ರ

ಪುತ್ತೂರು: ಜಾಗದ ಬೇಲಿಯ ವಿಚಾರದಲ್ಲಿ ತಂದೆ ಮತ್ತು ಮಗನಿಗೆ ವ್ಯಕ್ತಿಯೊಬ್ಬರು ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಲ್ಲಿ ನಡೆದಿದೆ.

ಬಲ್ನಾಡಿನ ರವಿ ಮತ್ತು ಅವರ ಪುತ್ರ ಲೋಕೇಶ್ ಹಲ್ಲೆಗೊಳಗಾದವರು. ಹಲ್ಲೆಗೊಳಗಾದ ರವಿ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಲೋಕೇಶ್ ಅವರು ಹೊರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದಾರೆ. ನೆರೆಯ ನಿವಾಸಿ ಬಾಲು ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ರವಿ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಬಾಲು ಕತ್ತಿಯನ್ನು ಹಿಡಿದುಕೊಂಡು ತಮ್ಮ ಮನೆಯ ಬಳಿಗೆ ಬಂದು ಬೇಲಿಯ ವಿಚಾರದಲ್ಲಿ ತಕರಾರು ಎತ್ತಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಹಲ್ಲೆ ತಡೆಯಲು ಬಂದ ಪುತ್ರನ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಸಂಪ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT