ಮಂಗಳೂರು: ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ನಗರದ ನಂತೂರು ಜಂಕ್ಷನ್ ಬಳಿ ಗುರುವಾರ ಸಂಜೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲ್ಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ.

ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್ ಅವರು ಯುವತಿಯೊಬ್ಬರ ಜೊತೆ ಪ್ರಯಾಣಿಸುತ್ತಿದ್ದರು.

‘ಬಸ್ ನಂತೂರು ಜಂಕ್ಷನ್ ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ಬೈದರು. ಬಸ್‌ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದರು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದರು‘ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆ ಕುರಿತ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸಿರುವ ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಲೋಕ್ ಕುಮಾರ್, ‘ಈ ಘಟನೆಗೆ ಸಂಬಂಧಿಸಿ ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.