ಬುಧವಾರ, ನವೆಂಬರ್ 25, 2020
26 °C

ಆತ್ಮನಿರ್ಭರ: ₹600 ಕೋಟಿ ಪ್ರಸ್ತಾವ- ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಆತ್ಮನಿರ್ಭರ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹4,750 ಕೋಟಿ ನೀಡುವುದಾಗಿ ಘೋಷಿಸಿದ್ದು, ಇದರಡಿ ಸಹಕಾರ ಇಲಾಖೆಗೆ ₹600 ಕೋಟಿ ಅನುದಾನ ನೀಡಲು ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ನಗರದಲ್ಲಿ ಭಾನುವಾರ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ನಬಾರ್ಡ್‌ ಮೂಲಕ ಸಹಕಾರ ಇಲಾಖೆಗೆ ₹1,750 ಕೋಟಿ ಅನುದಾನ ಒದಗಿಸಿದೆ ಎಂದರು.

ಈಗಾಗಲೇ 20 ಡಿಸಿಸಿ ಬ್ಯಾಂಕ್‌ಗಳು ಸೇರಿದಂತೆ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಹಾಗೂ ₹3 ರ ಬಡ್ಡಿದರದಲ್ಲಿ ₹10 ಸಾವಿರ ಕೋಟಿ ಕೃಷಿ ಸಾಲ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.

‘ವಂಚನೆ ಮಾಡಿದ ಬ್ಯಾಂಕ್ ಹಾಗೂ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಡಿಸಿಸಿ ಬ್ಯಾಂಕ್‌ಗಳಿಗೆ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ನೇಮಿಸಿ, ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿಯ ಪರಿಶೀಲನೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು