ಶುಕ್ರವಾರ, ನವೆಂಬರ್ 27, 2020
18 °C

ಫೋಟೊಗ್ರಾಫರ್ ಮೇಲೆ ತಲವಾರಿನಿಂದ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಟ್ವಾಳ: ಬಿಜೆಪಿಯ ಪುದು ಶಕ್ತಿ ಕೇಂದ್ರದ ಸಾಮಾಜಿಕ ಜಾಲತಾಣ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ಅವರ ಫರಂಗಿಪೇಟೆಯಲ್ಲಿನ ಸ್ಟುಡಿಯೊಗೆ ಬುಧವಾರ ಸಂಜೆ ನುಗಿದ್ದ ದುಷ್ಕರ್ಮಿಗಳು, ತಲವಾರಿನಿಂದ ಹಲ್ಲೆ ನಡೆಸಿದ್ದಾರೆ.

ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ದಿನೇಶ್,  ಫರಂಗಿಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸ್ಟುಡಿಯೊ ಹೊಂದಿದ್ದಾರೆ. ಅಲ್ಲಿಗೆ ರಾತ್ರಿ 8 ಗಂಟೆ ಸುಮಾರಿಗೆ ನುಗ್ಗಿದ ದುಷ್ಕರ್ಮಿಗಳ ತಂಡವು ದಾಳಿ ನಡೆಸಿ ಪರಾರಿಯಾಗಿದೆ. ಅವರ ತಲೆ, ಹೊಟ್ಟೆ ಮತ್ತಿತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ನಿಖರ ಕಾರಣವು ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಇನ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್, ಸಬ್‌ಇನ್‌ಸ್ಪೆಕ್ಟರ್‌ಗಳಾದ ಪ್ರಸನ್ನ, ಅವಿನಾಶ್ ಗೌಡ ಭೇಟಿ ನೀಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು