ಗುರುವಾರ , ಸೆಪ್ಟೆಂಬರ್ 23, 2021
22 °C

ವಿಟ್ಲ ಸಬ್ ಇನ್‌ಸ್ಪೆಕ್ಟರ್ ಮೇಲೆ ಗುಂಡಿನ ದಾಳಿ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಟ್ಲ (ದಕ್ಷಿಣ ಕನ್ನಡ ಜಿಲ್ಲೆ): ಇಲ್ಲಿನ ಸಾಲೆತ್ತೂರು ಕೊಡಂಗೆ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ ನಸುಕಿನಲ್ಲಿ ಕೇರಳದ ‘ಡಿ ಗ್ಯಾಂಗ್’ ತಂಡವು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ನೆರೆಯ ಕೇರಳದ ಉಪ್ಪಳದಲ್ಲಿ ಬಾರ್‌ನಲ್ಲಿ ಗಲಾಟೆ ಮಾಡಿ, ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗುತ್ತಿದ್ದ ‘ಡಿ ಗ್ಯಾಂಗ್’ ತಂಡವನ್ನು ವಿಟ್ಲ ಠಾಣೆಯ ಪೊಲೀಸರು ಚೆಕ್‌ಪೋಸ್ಟ್‌ನಲ್ಲಿ ತಡೆಯಲು ಮುಂದಾದಾಗ ಗುಂಡಿನ ದಾಳಿ ನಡೆಸಿದೆ. 

ಗ್ಯಾಂಗ್‌ನ ಸದಸ್ಯರಾದ ಕಾಸರಗೋಡಿನ ಮಂಗಲ್ಪಾಡಿಯ ಅಬ್ದುಲ್ ಲತೀಫ್ (26), ಮೀಯಪದವಿನ ಶಾಕೀರ್ (23) ಮತ್ತು ಅಡ್ಕಂತಗುರಿ ನಿವಾಸಿ ಅಶ್ಪಾಕ್ (25) ಬಂಧಿತರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು