ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು -ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಬಳಿ ಭಾನುವಾರ ರಾತ್ರಿ ನಡೆದಿದೆ.

ನಾವೂರಿನ ಶಶಿ ಎಂಬುವರ ಆಟೊದಲ್ಲಿದ್ದ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್ (12) ಮೃತಪಟ್ಟ ಬಾಲಕನಾಗಿದ್ದಾನೆ. ಗಾಯಗೊಂಡ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೊದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ನಡೆದ ಘಟನೆಯಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.