ಶುಕ್ರವಾರ, ಡಿಸೆಂಬರ್ 6, 2019
26 °C

ಶ್ರೀನಿವಾಸ ರಾವ್-ಸಾವಿತ್ರಿ ದಂಪತಿಗೆಪುತ್ತೂರು ಬೋಳಂತಕೋಡಿ ಕನ್ನಡ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಪುತ್ತೂರು: ಕನ್ನಡ ಸಾಹಿತ್ಯ ಪರಿಚಾರಕರು ಮತ್ತು ಮಕ್ಕಳಲ್ಲಿ ಅಕ್ಷರಪ್ರೀತಿ ಮೂಡಿಸುತ್ತಿರುವ ಮಂಗಳೂರಿನ ಬಿ.ಶ್ರೀನಿವಾಸ ರಾವ್ ಮತ್ತು ಸಾವಿತ್ರಿ ಎಸ್.ರಾವ್ ದಂಪತಿ ಪ್ರಸಕ್ತ ಸಾಲಿನ 'ಬೋಳಂತಕೋಡಿ ಕನ್ನಡ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.

ಪುತ್ತೂರಿನ 'ಬೋಳಂತಕೋಡಿ ಅಭಿಮಾನಿ ಬಳಗ'ದ ವತಿಯಿಂದ  ಇದೇ 15ರಂದು ಸಂಜೆ 5 ಗಂಟೆಗೆ ಪುತ್ತೂರಿನ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಪುತ್ತೂರು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಬೋಳಂತಕೋಡಿ ಈಶ್ವರ ಭಟ್ಟರ ಸಂಸ್ಮರಣೆ  ನಡೆಯುವುದು.

ರಾಜೇಶ್ ಪವರ್ ಪ್ರೆಸ್‌ನ ಮಾಲೀಕ ಎಂಎಸ್.ರಘುನಾಥ್ ರಾವ್ ಅಧ್ಯಕ್ಷತೆ ವಹಿಸುವರು. ವಕೀಲ ಕೆ.ಆರ್.ಆಚಾರ್ಯ ಬೋಳಂತಕೋಡಿ ಸ್ಮೃತಿ ನಮನ ಮಾಡುವರು. ಪ್ರಶಸ್ತಿ ಪುರಸ್ಕೃತರ ಕುರಿತು ಸುಮಂಗಲಾ ರತ್ನಾಕರ್ ಅಭಿನಂದನಾ ಮಾತುಗಳನ್ನಾಡುವರು.  ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ಮುಖ್ಯ ಅತಿಥಿಗಳಾಗಿವರು. `ಧೀಶಕ್ತಿ' ಮಹಿಳಾ ಯಕ್ಷಬಳಗದಿಂದ ತಾಳಮದ್ದಳೆ ನಡೆಯುವುದು.

ಪುಸ್ತಕ ಹಬ್ಬ: ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಇದೇ 14ರಿಂದ 16ವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟದ 'ಪುಸ್ತಕ ಹಬ್ಬ' ನಡೆಯಲಿದೆ.

ಪ್ರತಿಕ್ರಿಯಿಸಿ (+)