ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗೃತಿಯಿಂದ ಎಚ್‍ಐವಿ ಸೋಂಕು ತಡೆ ಸಾಧ್ಯ

ವಿಶ್ವ ಏಡ್ಸ್‌ ದಿನಾಚರಣೆ ಉದ್ಘಾಟಿಸಿದ ನ್ಯಾಯಾಧೀಶೆ ಎ.ಜೆ. ಶಿಲ್ಪಾ
Last Updated 1 ಡಿಸೆಂಬರ್ 2020, 16:37 IST
ಅಕ್ಷರ ಗಾತ್ರ

ಮಂಗಳೂರು: ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಎಚ್‍ಐವಿ ಸೋಂಕನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ. ಶಿಲ್ಪಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಗರ ಪೊಲೀಸ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಸಮುದಾಯ ಆರೋಗ್ಯ ನರ್ಸಿಂಗ್ ವಿಭಾಗ, ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಗರದ ದೇರಳಕಟ್ಟೆಯ ಯೆಂಡ್ಯೂರೆನ್ಸ್ ಸಭಾಂಗಣದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಜನರು ಜಾಗೃತರಾಗಿ ಮುಂಜಾಗ್ರತಾ ಕ್ರಮ ಕೈಗೊಂಡಾಗ ಮಾತ್ರ ರೋಗಗಳಿಂದ ದೂರವಿರಲು ಸಾಧ್ಯ. ಎಚ್‍ಐವಿ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಜಾಗರೂಕರನ್ನಾಗಿ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ಮಾತನಾಡಿ, ಗ್ರಾಮೀಣ ಮಟ್ಟದಿಂದ ನಗರದವರೆಗೂ ಜನರಿಗೆ ಅಸುರಕ್ಷಿತ ಲೈಂಗಿಕ ಕ್ರಿಯೆ, ರಕ್ತದಾನ, ತಾಯಿ ಮಗುವಿಗೆ ಸೋಂಕು ಇದೆಯೇ ಎಂಬುವುದನ್ನು ಪರೀಕ್ಷೆಯ ಮೂಲಕ ದೃಢಪಡಿಸಿ ಸೂಕ್ತ ಚಿಕಿತ್ಸೆಗೆ ಒಳಪಡಿಸುವುದು, ಮಾದಕ ವ್ಯಸನ ಇವುಗಳ ಕುರಿತು ಅರಿವು ಮೂಡಿಸಿ, ಎಚ್‍ಐವಿ ಸೋಂಕನ್ನು ಮಟ್ಟಹಾಕಬೇಕು ಎಂದು ಹೇಳಿದರು.

ಎಚ್‍ಐವಿ ಸೋಂಕಿತರಿಗೆ ಬೆಂಬಲ ನೀಡಿರುವ 3 ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಗುರುತಿಸಿ ಸನ್ಮಾನಿಸಲಾಯಿತು. ಜಿಲ್ಲೆಯ ಉತ್ತಮ ರೆಡ್ ರಿಬ್ಬನ್‌ ಕ್ಲಬ್‌ಗಳಿಗೆ ಗೌರವ ಸಲ್ಲಿಸಲಾಯಿತು. ರಸಪ್ರಶ್ನೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಎಸಿಪಿ ರಂಜಿತ್, ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ವಿಜಯ ಕುಮಾರ್, ಕುಲಸಚಿವ ಡಾ.ಕೆ.ಎಸ್. ಗಂಗಾಧರ ಸೋಮಯಾಜಿ, ವೈದ್ಯಕೀಯ ಅಧೀಕ್ಷಕ ಡಾ. ಸಂಪತ್ತಿಲ ಪದ್ಮನಾಭ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಲೀನಾ ಕೆ.ಸಿ., ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವ್ಶೆದ್ಯಾಧಿಕಾರಿ ಡಾ.ಶರತ್ ಉಪಸ್ಥಿತರಿದ್ದರು. ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಕಾರ್ಯಕ್ರಮಾಧಿಕಾರಿ ಡಾ. ಬದ್ರುದ್ದೀನ್ ಎಂ.ಎನ್. ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT