ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ವಿಶೇಷ ಪೂಜೆಯೊಂದಿಗೆ ಸಂಭ್ರಮ

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ
Last Updated 5 ಆಗಸ್ಟ್ 2020, 9:53 IST
ಅಕ್ಷರ ಗಾತ್ರ

ಮಂಗಳೂರು: ರಾಮ ಮಂದಿರ ಭೂಮಿಪೂಜೆಯ ಸಂದರ್ಭವನ್ನು ಜಿಲ್ಲೆಯಾದ್ಯಂತ ವಿಶೇಷ ಪೂಜೆಯೊಂದಿಗೆ ಸಂಭ್ರಮಿಸಲಾಯಿತು.

ಪೊಳಲಿಯಲ್ಲಿ ಪೂಜೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸುವ ಸಂದರ್ಭದಲ್ಲಿ ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಪೊಳಲಿ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿಯಾಗಿ ಆಶಿರ್ವಾದ ಪಡೆದರು. ಇವರ ಜೊತೆಗೆ ಅಕ್ರಮ ಸಕ್ರಮ ಸಮಿತಿ ಸದಸ್ಯ ರಮಾನಾಥ ರಾಯಿ ಉಪಸ್ಥಿರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ, ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ,ಯುವ ಮೋರ್ಚಾದ ಸುದರ್ಶನ್ ಬಜ,ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್,ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ,ನಂದರಾಮ್ ರೈ,,ಸುಕೇಶ್ ಚೌಟ,ವಾಮನ ಆಚಾರ್ಯ ಉಪಸ್ಥಿತರಿದ್ದರು.

ರಾಮಧ್ವಜದ ಬಲೂನ್ ಆಗಸಕ್ಕೆ
ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸುವ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದೊಂದಿಗೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ನಾಲ್ಕು ಕಡೆಗಳಲ್ಲಿ ಏಕ ಕಾಲಕ್ಕೆ ಮುಹೂರ್ತದ ಸಮಯದಲ್ಲಿ ಬಲೂನ್ ಗಳನ್ನು ಜೈ ಶ್ರೀ ರಾಮ್ ದ್ವಜದೊಂದಿಗೆ ಬಾನಿಗೆ ಹಾರಿಸಲಾಯಿತು.
ರಥಬೀದಿ, ಬಿಕರ್ನಕಟ್ಟೆ ಕೈಕಂಬ, ಮಂಗಳಾದೇವಿ, ಪಂಪ್ ವೆಲ್‌ಗಳಲ್ಲಿ‌ ಈ ಕಾರ್ಯಕ್ರಮ ನಡೆಯಿತು.

ಐತಿಹಾಸಿಕ ದಿನ: ನಳಿನ್
ರಾಮ ಮಂದಿರದ ಭೂಮಿಪೂಜೆ ನೆರವೇರುತ್ತಿರುವುದು ಸಂಭ್ರಮದ ಹಾಗೂ ಐತಿಹಾಸಿಕ ದಿನ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭವ್ಯತೆ, ಧನ್ಯತೆ ತುಂಬಿರುವ ದಿನ. ಬಿಜೆಪಿಯ ಸಂಕಲ್ಪ ಈಡೇರಿದ ದಿನ. ಶತಮಾನಗಳಿಂದ ಕೋಟ್ಯಂತರ ಹಿಂದೂಗಳ ಪೂಜೆಯು ಫಲಿಸಿದ ದಿನ.ಆರ್ ಎಸ್ಎಸ್, ವಿಎಚ್ ಪಿ ಕನಸು ನನಸಾದ ದಿನ. ಇದಕ್ಕೆ ಸಹಕರಿಸಿದ ಸಾಧು ಸಂತರು, ಮಹಂತರು, ಹೋರಾಟಗಾರರು, ಕರಸೇವಕರು, ರಾಜಕೀಯ ನೇತಾರರ ಶ್ರಮವನ್ನು ಸ್ಮರಿಸುವ ದಿನ. ನಮ್ಮಂಥ ಲಕ್ಷಾಂತರ ಕಾರ್ಯಕರ್ತರಿಗೆ ಪ್ರೇರಣೆಯ ದಿನ ಎಂದು ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT