ಮಂಗಳೂರು: ಬಿ– ಹ್ಯೂಮನ್ ಸಂಸ್ಥೆಯ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ವೈಟ್ಸ್ಟೋನ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಇಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಶೈಕ್ಷಣಿಕ ಹಾಗೂ ವೈದ್ಯಕೀಯ ನೆರವು ನೀಡುವುದು ಹಾಗೂ ಸಂಸ್ಥೆಯ ಕಾರ್ಯಚಟುವಟಿಕೆ ವಿಸ್ತರಿಸುವ ನಿಟ್ಟಿನಲ್ಲಿ ಬೆಂಗಳೂರು ಶಾಖೆ ಸ್ಥಾಪಿಸುವ ಬಗ್ಗೆ ಯೋಚಿಸಲಾಗುವುದು ಎಂದು ನೂತನ ಅಧ್ಯಕ್ಷರು ಭರವಸೆ ನೀಡಿದರು.

ಸಂಸ್ಥೆಯ ಪೋಷಕ ಅಬ್ಬಾಸ್ ಅಹ್ಮದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಅಬ್ಬಾಸ್ ಉಚ್ಚಿಲ, ಪುತ್ತೂರು ಕಮ್ಯುನಿಟಿ ಸೆಂಟರ್ ಮುಖ್ಯಸ್ಥ ಹನೀಫ್, ಮೇಕ್ ಎ ಚೇಂಜ್ ಸಂಸ್ಥೆಯ ಮುಖ್ಯಸ್ಥ ಸುಹೈಲ್ ಕಂದಕ್ ಮಾತನಾಡಿದರು.

ಹೋಪ್ ಫೌಂಡೇಷನ್ ಸ್ಥಾಪಕ ಸೈಫ್ ಮಾತನಾಡಿ, ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ ಬೆಂಬಲಿಸುವ ಬಗ್ಗೆ ಗಮನ ಹರಿಸುವ ಅಗತ್ಯ ಇದೆ ಎಂದರು.

ಬಿ ಹ್ಯೂಮನ್ ಸ್ಥಾಪಕ ಅಧ್ಯಕ್ಷ ಆಸೀಫ್ ಡೀಲ್ಸ್ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಸಂಸ್ಥೆ ಜಾತಿ, ಧರ್ಮ ಭೇದವಿಲ್ಲದೆ ಬಡವರು, ರೋಗಿಗಳ ಸೇವೆ ಮಾಡುತ್ತ ಬಂದಿದೆ. ಎರಡೂವರೆ ವರ್ಷಗಳಲ್ಲಿ ಡಯಾಲಿಸಿಸ್ ಅಗತ್ಯವಿರುವ ಬಡರೋಗಿಗಳ ಡಯಾಲಿಸಿಸ್ಗೆ ₹80 ಲಕ್ಷಕ್ಕೂ ಅಧಿಕ ಮೊತ್ತ ನೀಡಿದೆ ಎಂದರು.

ಮೊಹಮ್ಮದ್ ಸಿರಾಜ್ ಸ್ವಾಗತಿಸಿದರು. ಜೀಶನ್ ಅಲಿ ವಾರ್ಷಿಕ ವರದಿ ಮಂಡಿಸಿದರು. ಟ್ರಸ್ಟಿ ಮುಝಪರ್ ಸಂಸ್ಥೆಯ ಸಾಧನೆ ವಿವರಿಸಿದರು. ಮೊಹಮ್ಮದ್ ಆಹ್ನಫ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.