ಶನಿವಾರ, ಡಿಸೆಂಬರ್ 5, 2020
24 °C
ನಿಧನ

ಬಿ.ಎಂ.ರವೀಂದ್ರ ಆಚಾರ್ಯ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ಬೋಳೂರಿನ ಬಿ.ಎಂ. ರವೀಂದ್ರ ಆಚಾರ್ಯ (72) ಸೋಮವಾರ ರಾತ್ರಿ ನಿಧನರಾದರು.

ಸುದೀರ್ಘ 26 ವರ್ಷಗಳ ಕಾಲ ಮಂಗಳೂರಿನ ಎಸ್. ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದರು. ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ, ಕಾಳಿಕಾಂಬಾ ಸೇವಾ ಸಮಿತಿ, ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾದಲ್ಲಿ ಸಕ್ರಿಯರಾಗಿದ್ದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ.  

ಬಿ. ದೇವದಾಸ್ ಕಾಮತ್ ನಿಧನ

ಮಂಗಳೂರು ನಗರದ ಲಾಲ್‍ಭಾಗ್‍ನ ಕೇಶವ್ ಅಪಾರ್ಟ್‍ಮೆಂಟ್ ನಿವಾಸಿ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಮುಖ್ಯ ವ್ಯವಸ್ಥಾಪಕ ಬಿ. ದೇವದಾಸ್ ಕಾಮತ್ (63) ಸೋಮವಾರ ನಿಧನರಾದರು.

ಇವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ, ಗುರ್ಗಾಂವ್, ಬೆಂಗಳೂರು ಹಾಗೂ ಮಂಗಳೂರು ಶಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಸತ್ಯಾನಾರಾಯಣ ಎ.ಎಸ್. ನಿಧನ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಏನೆಕಲ್ಲು ನಿವಾಸಿ ಸುಬ್ರಾಯ ಅಸ್ರಣ್ಣರ ಪುತ್ರ ಸತ್ಯನಾರಾಯಣ ಎ.ಎಸ್ (59) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಇವರು ಸುಬ್ರಹ್ಮಣ್ಯ ದೇವಸ್ಥಾನದ ನಿವೃತ್ತ ಶಿಷ್ಟಾಚಾರ ಅಧಿಕಾರಿ ಎ.ವಿ.ರಾಜ್ ಹಾಗೂ ಏನೆಕಲ್ಲು ಪ್ರಾಥಮಿಕ ಪತ್ತಿನ ಸಹಕಾರಿ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎ.ಎಸ್ ಅವರ ಸಹೋದರ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.