ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಬುಧವಾರ ನಡೆಯಿತು.

ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ಆನುವಂಶಿಕ ಮೊಕ್ತೇಸರ ಕೆ.ಸುಂದರ ರಾವ್ ಮತ್ತು ಅರ್ಚಕ ನಾಗೇಶ ರಾವ್ ವಿಶೇಷ ಪೂಜೆ ನೆರವೇರಿಸಿದರು.

ಭಜನೆ ಸಹಿತ ದೇವರ ಬಲಿ, ಪಲ್ಲಕಿ ಉತ್ಸವ, ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು. ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಬಿ.ಸಿ.ರೋಡ್ ಶ್ರೀ ಅನ್ನಪೂಣೇಶ್ವರಿ ದೇವಸ್ಥಾನದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಸಿದ್ದಕಟ್ಟೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ರಾಯಿ ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ ಕೊಯಿಲ, ಸಮಿತಿ ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್, ರವೀಂದ್ರ ಪೂಜಾರಿ, ಶಾಂತಾ ಅರುಣ್, ಲೋಕೇಶ್ ಕೈತ್ರೋಡಿ, ಸತ್ಯವತಿ, ವಾರಿಜಾ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ ಮತ್ತಿತರರು ಪಾಲ್ಗೊಂಡಿದ್ದರು.

ಸಂಜೆ ಭಜನೆ, ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಮೈಸಂದಾಯ, ರಕ್ತೇಶ್ವರಿ, ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ ದೈವಗಳ ನೇಮ ನಡೆಯಿತು.

ವಿವಿಧೆಡೆ ಷಷ್ಠಿ ಮಹೋತ್ಸವ: ತಾಲ್ಲೂಕಿನ ರಾಯಿ ಮಹಾಲಿಂಗೇಶ್ವರ ದೇವಸ್ಥಾನ, ಶಂಭೂರು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ಸಜಿಪಮುನ್ನೂರು ಮುಗುಳಿಯ ಸುಬ್ರಹ್ಮಣ್ಯ ದೇವಸ್ಥಾನ ಮತ್ತಿತರ ಕಡೆ ಷಷ್ಠಿ ಉತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.