ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಿಯಡ್ಕ| ಸರ್ಕಾರಿ ಶಾಲೆಯಲ್ಲಿ ಕನ್ನಡ ಬಾರದ ಶಿಕ್ಷಕಿ: ವಿದ್ಯಾರ್ಥಿಗಳ ಪ್ರತಿಭಟನೆ

Last Updated 4 ಆಗಸ್ಟ್ 2022, 8:53 IST
ಅಕ್ಷರ ಗಾತ್ರ

ಬದಿಯಡ್ಕ (ಕಾಸರಗೋಡು ಜಿಲ್ಲೆ): ‘ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ’ ಎಂದು ಆರೋಪಿಸಿ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹೈಯರ್ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಈ ಶಿಕ್ಷಕಿಯು 2019ರಲ್ಲಿ ಪೈವಳಿಕೆ ಸರ್ಕಾರಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಸೇರ್ಪಡೆಯಾಗಿದ್ದರು. ನಂತರ ವಿದ್ಯಾರ್ಥಿಗಳ ಪ್ರತಿಭಟನೆಯಿಂದ ರಜೆಯಲ್ಲಿ ತೆರಳಿದ್ದರು. ನ್ಯಾಯಾಲಯದ ನಿರ್ದೇಶನದಂತೆಕನ್ನಡ ಭಾಷೆಯಲ್ಲಿ ಪ್ರಾವೀಣ್ಯಪಡೆಯಲು ಮೈಸೂರಿನ ಸೆಂಟ್ರಲ್‌ ಇನ್‌ಸ್ಟಿಟ್ಯೂಟ್‌ ಅಫ್ ಇಂಡಿಯನ್ ಲಾಂಗ್ವೇಜಸ್‌ ಸಂಸ್ಥೆಗೆ 10 ತಿಂಗಳ ತರಬೇತಿಗೆ ತೆರಳಿದ್ದರು. ಇದೀಗ ಜಿಲ್ಲಾ ಶಿಕ್ಷಣ ಉಪನಿರ್ದೇಶಕರ ಆದೇಶದಂತೆ ಆದೂರು ಶಾಲೆಗೆ ಮಂಗಳವಾರ ಸೇರ್ಪಡೆಗೊಂಡಿದ್ದರು.

‘ಅವರ (ಕನ್ನಡ ಬಾರದ ಶಿಕ್ಷಕಿ) ತರಗತಿಯು ಅರ್ಥವಾಗುತ್ತಿಲ್ಲ’ ಎಂದು ದೂರಿದ ಕನ್ನಡ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರಿಗೆ ಮನವಿ ನೀಡಿದರು.

ಶಿಕ್ಷಕಿಯನ್ನು ವರ್ಗಾಯಿಸುವ ವರೆಗೆ ತರಗತಿ ಬಹಿಷ್ಕರಿಸಲು ನಿರ್ಧರಿಸಿದ್ದು, ಪೋಷಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT