ಗುರುವಾರ , ಮಾರ್ಚ್ 23, 2023
23 °C

ಉಪ್ಪಿನಂಗಡಿ: ಬಜತ್ತೂರು- ಹೊಸಗದ್ದೆ ಶಾಲೆ ‘ಮಾದರಿ ಶಾಲೆ’ಯಾಗಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಪ್ಪಿನಂಗಡಿ: ‘ಬಜತ್ತೂರು ಗ್ರಾಮದ ಹೊಸಗದ್ದೆ ಹಿರಿಯ ಪ್ರಾಥಮಿಕ ಶಾಲೆ ‘ಮಾದರಿ ಶಾಲೆ’ಯಾಗಿ ಆಯ್ಕೆಯಾಗಿದೆ. ಮುಂದಿನ ವರ್ಷ ಈ ಶಾಲೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿದೆ’ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಹೊಸಗದ್ದೆ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಭಿವೃದ್ಧಿಗಾಗಿ ಈಗಾಗಲೇ ಅನುದಾನಗಳನ್ನು ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿನ ಹಲವು ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ಆರಂಭಿಸಲಾಗಿದೆ. ಕೊಠಡಿಗಳ ನಿರ್ಮಾಣ ಕಾರ್ಯ ನಡೆಸಲಾಗಿದೆ. ಹೊಸಗದ್ದೆ ಸರ್ಕಾರಿ ಶಾಲೆಯು ಉಪ್ಪಿನಂಗಡಿ, ಬಜತ್ತೂರು ಹಾಗೂ ಹಿರೇಬಂಡಾಡಿ ಗ್ರಾಮಗಳ ಕೇಂದ್ರ ಸ್ಥಾನದಲ್ಲಿದ್ದು, ಮಾದರಿ ಶಾಲೆಯಾಗುವ ಮೂಲಕ ಮೂರು ಗ್ರಾಮಗಳ ವಿದ್ಯಾರ್ಥಿಳಿಗೆ ಅನುಕೂಲವಾಗಲಿದೆ’ ಎಂದರು.

ಬಜತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ನೆಕ್ಕರಾಜೆ ಅಧ್ಯಕ್ಷತೆ ವಹಿಸಿದ್ದರು. ಬಜತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಶಾಲಾ ಧ್ವಜಾರೋಹಣ ನೆರವೇರಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮುಕುಂದ ಬಜತ್ತೂರು, ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಅತ್ರಮಜಲು, ಪುರುಷೋತ್ತಮ ಮುಂಗ್ಲಿಮನೆ, ಎಸ್‌ಡಿಎಂಸಿ ಉಪಾಧ್ಯಕ್ಷ ರವಿಕುಮಾರ್ ಕಣಿಯ, ಸದಸ್ಯ ಮೇಘಾ ಪಾಲೆತ್ತಾಡಿ, ದೇರಣ್ಣ ಗೌಡ ಓಮಂದೂರು, ಉಮೇಶ್ ಓಮಂದೂರು, ರುಕ್ಮಯ್ಯ ಗೌಡ ಓಮಂದೂರು, ಯಶೋಧರ ಗೌಡ ಬೈರುಮಾರು ಇದ್ದರು.
ಶಾಲಾ ಮುಖ್ಯಶಿಕ್ಷಕಿ ಫೆಲ್ಸಿ ಡೈಸ್ ಸ್ವಾಗತಿಸಿದರು. ವಿದ್ಯಾ ವಂದಿಸಿದರು. ಮಾಲತಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು