ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜಪೆ | ಸಾರ್ವಜನಿಕ ಸ್ಥಳದಲ್ಲಿ ಜಗಳ; ಇಬ್ಬರ ಬಂಧನ

Published 22 ಆಗಸ್ಟ್ 2023, 13:21 IST
Last Updated 22 ಆಗಸ್ಟ್ 2023, 13:21 IST
ಅಕ್ಷರ ಗಾತ್ರ

ಬಜಪೆ: ಗುರುಪುರ ಕೈಕಂಬ ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಜಗಳವಾಡುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲ್ಲೂಕು ತೆಂಕಬೆಳ್ಳೂರು ನಿವಾಸಿ ಶಿವಪ್ರಸಾದ್ (39), ಶಕ್ತಿನಗರ ಕಾರ್ಮಿಕ ಕಾಲೊನಿ ನಿವಾಸಿ ಷಡ್ರಕ್ ಇಮ್ಯಾನುವಲ್ ಯಾನೆ ಮನು (39) ಎಂದು ಗುರುತಿಸಲಾಗಿದೆ.

ಆರೋಪಿಗಳು ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ವೈಯಕ್ತಿಕ ವಿಚಾರವಾಗಿ ಹೊಡೆದಾಡಿಕೊಂಡಿದ್ದರು. ತಕ್ಷಣ ಸ್ಥಳೀಯರು ಬಜಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT