ಶುಕ್ರವಾರ, ಡಿಸೆಂಬರ್ 2, 2022
20 °C

ಬಾಲವನ ಪ್ರಶಸ್ತಿಗೆ ಅಕ್ಷರ ಕೆ.ವಿ. ಭಾಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು (ದಕ್ಷಿಣ ಕನ್ನಡ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ವತಿಯಿಂದ ಪ್ರತಿ ವರ್ಷ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹೆಗ್ಗೋಡಿನ ರಂಗಕರ್ಮಿ ಅಕ್ಷರ ಕೆ.ವಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯ
ದರ್ಶಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್. ಎಂ ತಿಳಿಸಿದ್ದಾರೆ.

ಪ್ರಶಸ್ತಿಯು ₹ 25,000 ನಗದು ಒಳಗೊಂಡಿದೆ. ಅ.10ರಂದು ಪುತ್ತೂರಿನಲ್ಲಿ ನಡೆಯುವ ಡಾ.ಕಾರಂತರ 121ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.