ಶುಕ್ರವಾರ, ಮೇ 20, 2022
21 °C

ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಲ್ಲಾಳ್‌ಬಾಗ್ ಫ್ರೆಂಡ್ಸ್‌ ಸಂಘಟನೆ ಸದಸ್ಯರ ಮೇಲೆ ಬೇರೆ ಧರ್ಮದ ಯುವಕರ ತಂಡ ದಾಳಿ ಮಾಡಿ, ಹಲ್ಲೆ ನಡೆಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಸಂಘಟನೆಯ ಉಪಾಧ್ಯಕ್ಷ ರಕ್ಷಿತ್ ಕೊಟ್ಟಾರಿ ಒತ್ತಾಯಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಟೋಬರ್ 30ರ ರಾತ್ರಿ ಅಳಕೆಯ ಸುಮಾರು 15 ಮಂದಿ ಯುವಕರ ತಂಡ ವಿನಾಕಾರಣ ನಮ್ಮ ಸಂಘಟನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದೆ. ಪೊಲೀಸರು ಪ್ರಮುಖ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಘಟನೆಯ ಹಿಂದೆ ಯಾರಿದ್ದಾರೆ, ಯಾಕೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು. ಘಟನೆ ಕುರಿತಂತೆ, ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

ಘಟನೆ ನಡೆದು ವಾರ ಕಳೆದರೂ ತನಿಖೆ ಸರಿಯಾಗಿ ಆಗಿಲ್ಲ. ಪೊಲೀಸ್ ಇಲಾಖೆ ಮುತುವರ್ಜಿವಹಿಸಿ, ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಸಂಘಟನೆಯ ಪ್ರಮುಖ ಧನಂಜಯ ಕೊಟ್ಟಾರಿ ಒತ್ತಾಯಿಸಿದರು.

15 ವರ್ಷಗಳಿಂದ ಧಾರ್ಮಿಕ ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಬಲ್ಲಾಳ್‌ಬಾಗ್ ಫ್ರೆಂಡ್ಸ್‌ನ ಕಾರ್ಯಗಳಿಗೆ ಅಡ್ಡಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ಪರಿಸದಲ್ಲಿ ಅಶಾಂತಿ ತಲೆದೋರಿದೆ ಎಂದರು.

ಸಂಘಟನೆ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪದಾಧಿಕಾರಿಗಳಾದ ಯಾದವ ಪೂಜಾರಿ, ಮೋಹಿತ್ ಶೆಟ್ಟಿ, ರೋಹಿತ್ ಶೆಟ್ಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.