ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ತುಳು ಭಾಷೆ ಪ್ರಧಾನವಾಗಿದ್ದರೂ ಕನ್ನಡದ ಜೊತೆಗೆ ಬ್ಯಾರಿ ಭಾಷೆಯೂ ವ್ಯಾವಹಾರಿಕವಾಗಿ ಪರಸ್ಪರ ಬೆಸೆದುಕೊಂಡಿದೆ. ಕರಾವಳಿ ಭಾಗದಲ್ಲಿ ಭಾಷಾ ಸಾಮರಸ್ಯ ಇದೆ ಎನ್ನುವುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದರು.

ಇಲ್ಲಿನ ಪಾಣೆಮಂಗಳೂರಿನಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ವತಿಯಿಂದ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದೇ ವೇಳೆ ಉಮೈರತ್ ಕುಮೇರ್ ಅವರು ಬರೆದ ಬ್ಯಾರಿ ಕಥಾ ಸಂಕಲನ ಬಿಡುಗಡೆಗೊಳಿಸಿದರು.

ಕವಿ, ಗಾಯಕ ರಹೀಂ ಬಿ.ಸಿ.ರೋಡ್ ಸಮ್ಮೇಳನಾಧ್ಯಕ್ಷತೆ ವಹಿಸಿ ಮಾತನಾಡಿ, ಈ ಜಿಲ್ಲೆಯಲ್ಲಿ ಬ್ಯಾರಿ ಭಾಷೆ ನಮ್ಮ ಮಾತೃಭಾಷೆಯಾಗಿದೆ. ಬ್ಯಾರಿ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಕವಿ ಮತ್ತು ಸಾಹಿತಿಗಳಿಗೆ ಸೀಮಿತವಾಗದೆ ಎಲ್ಲ ಸುಶಿಕ್ಷಿತ ಯುವಜನತೆಯ ಜವಾಬ್ದಾರಿ ಮೇಲಿದೆ ಎಂದರು.

ನಾವು ಶಿಕ್ಷಣ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ಮಾತೃಭಾಷೆ ಮರೆಯಬಾರದು. ಯುವ ಜನತೆ ಸಹವಾಸ ದೋಷದಿಂದ ಹಾದಿ ತಪ್ಪದೆ ಶಿಕ್ಷಣದ ಜೊತೆಗೆ ನಮ್ಮ ಗೌರವ ಹೆಚ್ಚಿಸಿಕೊಳ್ಳಲು ಜೀವನ ಮೌಲ್ಯ ಮತ್ತು ಉತ್ತಮ ತರಬೇತಿ ನೀಡಬೇಕು ಎಂದರು.

ಮನೆಯಲ್ಲಿ ಮಾತೃಭಾಷೆಯಲ್ಲಿಯೇ ಮಾತನಾಡುವುದು ಸೇರಿದಂತೆ ಮಾತೃ ಭಾಷೆಗಿರುವ ರುಚಿ ಇಂಗ್ಲಿಷ್ ಭಾಷೆಗಿಲ್ಲ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ಬ್ಯಾರಿ ಭಾಷೆ ಉಳಿವಿಗೆ ಅಕಾಡೆಮಿಯ ಪ್ರಯತ್ನ ನಡೆಯುತ್ತಿದ್ದು, ಸಾಹಿತಿಗಳು ಮತ್ತು ಕಲಾವಿದರ ಹಸಿವು ನೀಗಿಸುವ ಪ್ರಯತ್ನವೂ ಆಗಬೇಕು. ಅವರ ಬದುಕಿನ ಭದ್ರತೆಗಾಗಿ ಸರ್ಕಾರ ಮಾಸಾಶನ ನೀಡಿದಾಗ ಎಲ್ಲ ಭಾಷೆ, ಸಾಹಿತ್ಯ ಸಂಸ್ಕೃತಿ ಬೆಳೆಯಬಹುದು ಎಂದರು.

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖಂಡ ಎಂ.ಎಸ್.ಮಹಮ್ಮದ್, ಮೊಹಿದ್ದೀನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ತುಂಬೆ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಸೆನೆಟ್ ಸದಸ್ಯ ಡಾ.ಮುಸ್ತಾಫ ಬಸ್ತಿಕೋಡಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಝ್ ಎಚ್.ಐ., ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಮಹಮ್ಮದ್ ಹನೀಫ್ ಗೋಳ್ತಮಜಲು, ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಗೌರವ ಸಲಹೆಗಾರ ಪಿ.ಮೊಹಮ್ಮದ್ ರಫೀಕ್, ಅಕಾಡೆಮಿ ಸದಸ್ಯ ಸಂಚಾಲಕ ಅಬೂಬಕ್ಕರ್ ಅನಿಲಕಟ್ಟೆ, ಪ್ರಮುಖರಾದ ಪಿ.ಎ.ರಹೀಮ್, ಮಹಮ್ಮದ್ ಅಲಿ, ಬಿ.ಎಸ್.ಮಹಮ್ಮದ್, ಅಬ್ದುಲ್ ಲತೀಫ್ ನೇರಳಕಟ್ಟೆ, ತಾಜುದ್ದೀನ್ ಅಮ್ಮುಂಜೆ, ಖಾಲಿದ್ ಉಜಿರೆ, ಯು.ಮುಸ್ತಫಾ ಭಾಗವಹಿಸಿದ್ದರು.

ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪಿ.ಎಂ.ಅಶ್ರಫ್ ಕಾರ್ಯಕ್ರಮ ನಿರೂಪಿಸಿದರು.ಪಾಣೆಮಂಗಳೂರು ಶಾರದಾ ಪ್ರೌಢಶಾಲೆ ಬಳಿಯಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು. ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಧ್ವಜಾರೋಹಣ ನೆರವೇರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-1039953197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.