ಗುರುವಾರ , ಅಕ್ಟೋಬರ್ 22, 2020
24 °C

ಮಂಗಳೂರು: ಲೇಡಿಹಿಲ್‌ನಲ್ಲಿ ನಾರಾಯಣ ಗುರು ವೃತ್ತದ ಫಲಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರದ ಲೇಡಿಹಿಲ್‌ ವೃತ್ತದ ನಾಮಕರಣ ವಿಷಯ ಕಗ್ಗಂಟಾಗುತ್ತಿರುವ ಸಂದರ್ಭದಲ್ಲಿ ಬುಧವಾರ ಸಂಜೆ ಬಜರಂಗ ದಳದ ಧ್ವಜವನ್ನು ಹೊಂದಿ ‘ನಾರಾಯಣ ಗುರು ವೃತ್ತ’ ನಾಮಫಲಕವನ್ನು ಅಳವಡಿಸಲಾಗಿತ್ತು. ಇದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ನಾಮಕರಣ ವಿಷಯದ ಕುರಿತು ಪರ–ವಿರೋಧ ಚರ್ಚೆ ನಡೆಯುತ್ತಿದೆ. ಪಾಲಿಕೆಯಿಂದ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಏಕಾಏಕಿ ವೃತ್ತದ ಮಧ್ಯದಲ್ಲಿ ಫಲಕ ಅಳವಡಿಸಲಾಗಿದೆ. ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪೊಲೀಸರು, ಸ್ಥಳಕ್ಕೆ ಬಂದು ಫಲಕ ತೆರವು ಮಾಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು