ಮಂಗಳೂರು: ಅನುಮತಿ ಪಡೆದು ಹಾಕಿದ್ದ ಬ್ಯಾನರ್ ಅನ್ನು ಅಕ್ರಮವಾಗಿ ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಫರಂಗಿಪೇಟೆಯ ಹೈದರ್ ಎಂಬ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಫರಂಗಿಪೇಟೆಯ ನಿವಾಸಿ ಚಂದ್ರಶೇಖರ್ ಆಳ್ವ ಅವರು, ಸೇವಾಂಜಲಿ ಭವನದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶುಭ ಕೋರುವ ಬ್ಯಾನರ್ ಅನ್ನು ಪೂರ್ವಾನುಮತಿ ಪಡೆದು ಕುಂಪಣಮಜಲು ಕ್ರಾಸ್ ಬಳಿ ಅಳವಡಿಸಿದ್ದರು.

ಆರೋಪಿ ಹೈದರ್ ಬುಧವಾರ ರಾತ್ರಿ ಈ ಬ್ಯಾನರ್ ಅನ್ನು ಹರಿದು ಹಾಕಿ, ₹3,500 ನಷ್ಟ ಮಾಡಿದ್ದಲ್ಲದೆ, ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾನೆ. ಸಾರ್ವಜನಿಕರು ಪ್ರಚೋದನೆಗೊಂಡು ಗಲಭೆ ಏಳಬಹುದೆಂದು ತಿಳಿದಿದ್ದರೂ, ಉದ್ದೇಶಪೂರ್ವಕವಾಗಿ ಕೃತ್ಯ ನಡೆಸಿ ಸಾರ್ವಜನಿಕ ವಲಯದಲ್ಲಿ ಭೀತಿ ಉಂಟುಮಾಡಿದ ಕಾರಣಕ್ಕೆ ಹೈದರ್ ವಿರುದ್ಧ ಬಿಎನ್ ಎಸ್ ಕಾಯ್ದೆಯ ಕಲಂ 299, 191, 353 (1), 57, 324 (4) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.