ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ಮೆಹೆಂದಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಫರಂಗಿಪೇಟೆ ಸಮೀಪದ ಅಬ್ಬೆಟ್ಟು ನಿವಾಸಿ ಅಶ್ವಿತ್ (32) ಮೃತಪಟ್ಟಿದ್ದಾರೆ.

ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ತುಂಬೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ನಗರ ಪೊಲೀಸ್ ಠಾಣೆ ಮೂಲಗಳು ತಿಳಿಸಿವೆ.

ಉಜಿರೆ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ಶನಿವಾರ ಬೆಳಿಗ್ಗೆ ಇನೋವಾ ಕಾರು ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಉಜಿರೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಅಶೋಕ ಭಟ್ ಗಾಯಗೊಂಡವರು. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-29-489296808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.