ಬಂಟ್ವಾಳ: 1981ರಲ್ಲಿ ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ, ಸಹಕಾರಿ ಧುರೀಣ ಬಿ.ಹೂವಯ್ಯ ಮೂಲ್ಯ ನೇತೃತ್ವದಲ್ಲಿ ಆರಂಭಗೊಂಡ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆ ಉಳ್ಳಾಲ ತಾಲ್ಲೂಕಿನ ಬೋಳಿಯಾರುನಲ್ಲಿ ಮೇ 17ರಂದು ಬೆಳಿಗ್ಗೆ 10.30ಕ್ಕೆ ಆರಂಭಗೊಳ್ಳಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಸುರೇಶ ಕುಲಾಲ್, ‘ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೊಸ ಶಾಖೆಯನ್ನು ಉದ್ಘಾಟಿಸಲಿದ್ದು, ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು’ ಎಂದು ತಿಳಿಸಿದರು.

ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಭದ್ರತಾ ಕೊಠಡಿ, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೇಫ್ ಲಾಕರ್ ಉದ್ಘಾಟಿಸುವರು. ಮುಖಂಡ ಬಿ. ರಮಾನಾಥ ರೈ ಕಂಪ್ಯೂಟರ್ ಸೌಲಭ್ಯ ಉದ್ಘಾಟಿಸಲಿದ್ದು, ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ಠೇವಣಿ ಪತ್ರ ಬಿಡುಗಡೆಗೊಳಿಸುವರು ಎಂದು ತಿಳಿಸಿದರು.

ಸಂಘದ ಸಿಇಒ ಭೋಜ ಮೂಲ್ಯ, ಉಪಾಧ್ಯಕ್ಷ ಜನಾರ್ದನ ಬೊಂಡಾಲ, ನಿರ್ದೇಶಕರಾದ ರಮೇಶ ಸಾಲ್ಯಾನ್, ಅರುಣ್ ಕುಮಾರ್ ಕೆ., ಸತೀಶ್, ಬಿ. ರಮೇಶ ಸಾಲ್ಯಾನ್, ಸುರೇಶ್ ಕುಲಾಲ್ ಎನ್, ಭೋಜ ಸಾಲಿಯಾನ್, ಕಿರಣ್ ಕುಮಾರ್ ಎ, ಹರೀಶ್, ಪ್ರೇಮನಾಥ ಬಂಟ್ವಾಳ್, ಜಗನ್ನಿವಾಸ ಗೌಡ, ಗಣೇಶ ಸಮಗಾರ, ರೇಖಾ ನಾಯಕ್, ಶಾಖಾಧಿಕಾರಿ ಹರೀಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-1478841235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.