ಬಂಟ್ವಾಳ: ನಾವು ಜಾತಿಯ ಮೂಲಕ ಗುರುತಿಸಿಕೊಳ್ಳುವುದಕ್ಕಿಂತ ಭಾರತೀಯ ಎಂದು ಗುರುತಿಸಿಕೊಳ್ಳುವುದು ಹೆಮ್ಮೆಯ ವಿಚಾರವಾಗಿದ್ದು, ಜಾತಿಗಿಂತ ದೇಶ ಮುಖ್ಯ ಎಂದು ಹೋಟೆಲ್ ಉದ್ಯಮಿ ಪ್ರಕಾಶ್ ಬಿ.ಶೆಟ್ಟಿ ಬಂಜಾರ ಹೇಳಿದರು.

ಇಲ್ಲಿನ ರಾಯಿ -ಕೊಯಿಲ -ಅರಳ ಗ್ರಾಮಗಳ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ₹ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಜ್ಞಾನಮಂದಿರ ಮತ್ತು ಬಿಲ್ಲವ ಸಮುದಾಯ ಭವನ ಲೋಕಾರ್ಪಣೆ ಪ್ರಯುಕ್ತ ಭಾನುವಾರ ನಡೆದ ‘ಚಿಂತನಾ ಸಮಾವೇಶ’ದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಅವರು ಸಮುದಾಯ ಭವನ ಉದ್ಘಾಟಿಸಿದರು.

ಮುಖಂಡ ಬಿ.ಜನಾರ್ದನ ಪೂಜಾರಿ ಜ್ಞಾನ ಮಂದಿರ ಲೋಕಾರ್ಪಣೆಗೊಳಿಸಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾ ವೇದಿಕೆ ಉದ್ಘಾಟಿಸಿ, ‘ಬ್ರಹ್ಮಶ್ರೀ ನಾರಾಯಣ ಗುರುಗಳನ್ನೇ ಮುಂದಿಟ್ಟು ಕೊಂಡು ಹಿಂದೂ ಸಮಾಜ ಒಡೆಯುವ ಪ್ರಯತ್ನ ನಡೆಯಬಾರದು’ ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಂಘರ್ಷವಿಲ್ಲದೆ ಸಮಾಜ ಸುಧಾರಣೆ ಮಾಡಿದ ಬ್ರಹ್ಮಶ್ರೀ ಗುರು ನಮಗೆ ಆದರ್ಶ’ ಎಂದರು.

ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅನ್ನಛತ್ರ ಉದ್ಘಾಟಿಸಿದರು.

ಮುಂಬೈ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ಹರೀಶ ಜಿ.ಅಮೀನ್, ಭಾರತ್ ಕೊ–ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ.ಪೂಜಾರಿ, ವಾಸ್ತುಶಿಲ್ಪಿ ಪ್ರಮಲ್ ಕುಮಾರ್ ಕಾರ್ಕಳ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬೂಡ ಅಧ್ಯಕ್ಷ ಬೇಬಿ ಕುಂದರ್, ಉದ್ಯಮಿಗಳಾದ ಸಂದೇಶ್ ಶೆಟ್ಟಿ ಅರೆಬೆಟ್ಟು, ಪ್ರಫುಲ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಗುಜರಾತ್ ಬಿಲ್ಲವ ಸಂಘದ ನಿಕಟಪೂರ್ವ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೀಣಾ ರಾಜ್ ಮೋಹನ್ ಶೆಟ್ಟಿ ಕುದ್ಮಾಣಿ, ಅನಿಲ್ ಕುಮಾರ್, ವಸ್ತ್ರ ಉದ್ಯಮಿ ಪ್ರಕಾಶ್ ಅಂಚನ್, ರಾಯಿ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಮಾತನಾಡಿದರು.

ಪ್ರತಿಷ್ಠಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಅಧ್ಯಕ್ಷ ಜಯಪ್ರಕಾಶ್ ಜೆ.ಎಸ್., ಸಂಘದ ಗೌರವಾಧ್ಯಕ್ಷ ಶ್ರೀಧರ ಪೂಜಾರಿ, ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆ ಗುತ್ತು, ಮಹಿಳಾ ಸಮಿತಿ ಅಧ್ಯಕ್ಷೆ ಸುಚಿತ್ರಾ ರಮೇಶ್, ಪ್ರತಿಷ್ಠಾ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದೇವಪ್ಪ ಕರ್ಕೇರ ಭಾಗವಹಿಸಿದ್ದರು.

ಸಂಘಟನಾ ಕಾರ್ಯದರ್ಶಿ ದಿನೇಶ್ ಸುವರ್ಣ ಸ್ವಾಗತಿಸಿ, ಪ್ರತಿಷ್ಠಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಜ್ಞಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.