ಬಂಟ್ವಾಳ: ಪುರಸಭೆ ವ್ಯಾಪ್ತಿಯ ಕೌಡೇಲು ಮತ್ತು ರೆಂಗೇಲು ಪರಿಸರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಪುರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕೊಡಪಾನ ಮತ್ತು ಬಕೆಟ್ ಹಿಡಿದುಕೊಂಡು ಬಂದಿದ್ದ ಪ್ರತಿಭಟನಾಕಾರರು ಪುರಸಭೆ ಎದುರು ಬಟ್ಟೆ ತೊಳೆದು ಅಲ್ಲೇ ಒಣಗಿಸಿ ಗಮನ ಸೆಳೆದರು.

ಕಬೀರ್ ಆಹಮ್ಮದ್ ಮಾತನಾಡಿ, ಪುರಸಭೆ ವ್ಯಾಪ್ತಿಯ ಕೌಡೇಲು ಮತ್ತು ರೆಂಗೇಲು ಪರಿಸರದ ನಿವಾಸಿಗಳು ಕುಡಿಯುವ ನೀರಿಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ನಾವು ಹಲವು ಬಾರಿ ನೀಡಿರುವ ಮನವಿ ಮತ್ತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಈ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ತಿಂಗಳಿನಿಂದ ಇದ್ದರೂ ಸಮಯಕ್ಕೆ ಸರಿಯಾಗಿ ನೀರಿನ ಬಿಲ್ ನೀಡುತ್ತಿರುವುದು ನಾಚಿಕೆಗೇಡು ಎಂದು ಅವರು ಟೀಕಿಸಿದರು.

ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದಾಗ ಕೆಲಹೊತ್ತು ಪರಸ್ಪರ ಮಾತಿನ ಚಕಮಕಿ ನಡೆಯಿತು.

ಇಲ್ಲಿನ ಕೆಲವೊಂದು ಮನೆಗಳಲ್ಲಿ ಕುಡಿಯುವ ನೀರನ್ನು ಅಡಿಕೆ ಮತ್ತು ತೆಂಗಿನ ಗಿಡಗಳಿಗೆ ಬಳಸುವ ಮೂಲಕ ದುರುಪಯೋಗಪಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಾಧಿಕಾರಿ ಎಚ್ಚರಿಸಿದರು.

ಪ್ರಮುಖರಾದ ಶಬೀರ್, ನವಾಝ್, ಕಬೀರ್ ಅಕ್ಕರಂಗಡಿ, ಆಶ್ರಫ್ ತಲಪಾಡಿ, ಕುಂಞಿಮೋನು, ಹಮೀದ್, ರಝಾಕ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-29-872868359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.