ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ನಲ್ಲಿ ಈಚೆಗೆ ಗ್ಯಾರೇಜ್ ಮಾಲೀಕರ ಸಂಘದ ರಜತ ಸಂಭ್ರಮ ನಡೆಯಿತು.

ಉದ್ಯಮಿ ಶಶಿಧರ ಪೈ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಎಸ್ಎಲ್ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಸಾಧಕರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ವಾರ್ಷಿಕ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ಅಧ್ಯಕ್ಷರಾಗಿ ಗಣೇಶ್ ಸುವರ್ಣ ತುಂಬೆ, ಕಾರ್ಯದರ್ಶಿಯಾಗಿ ಉಮೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ್ ಭಂಡಾರಿ ಅಧಿಕಾರ ಸ್ವೀಕರಿಸಿದರು.

ವಕೀಲ ಅಶ್ವನಿ ಕುಮಾರ್ ರೈ ಮಾತನಾಡಿದರು. ಕಾರ್ಮಿಕ ಇಲಾಖೆ ನಿರೀಕ್ಷಕಿ ಲವೀನಾ ಡಿಸೋಜ ಅವರು ಸವಲತ್ತುಗಳ ಬಗ್ಗೆ, ಸಂಚಾರ ಠಾಣೆ ಎಸ್ಐ ಆದರ್ಶ ಎಂ.ಎಸ್. ವಾಹನ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.

ಉದ್ಯಮಿ ಯೋಗೀಶ್, ಸಂಘದ ಜಿಲ್ಲಾಧ್ಯಕ್ಷ ದಿನಕರ ಕುಲಾಲ್, ಗ್ಯಾರೇಜ್ ಮಾಲೀಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾ ನಿರ್ದೇಶಕ ಜೆ. ಪುಂಡಲೀಕ ಸುವರ್ಣ, ಜಿಲ್ಲಾ ಜಂಟಿ ಕಾರ್ಯದರ್ಶಿ ಅಬ್ದುಲ್ ಮೊಯ್ದೀನ್ ಇದ್ದರು.

ಸಂಘದ ಉಪಾಧ್ಯಕ್ಷ ಸಿದ್ದೀಕ್ ಮೆಲ್ಕಾರ್ ಸ್ವಾಗತಿಸಿ, ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರಾಜೇಶ್ ಕುಲಾಲ್ ವರದಿ ವಾಚಿಸಿದರು. ಕೋಶಾಧಿಕಾರಿ ಭಾಸ್ಕರ್ ಕುಲಾಲ್ ಲೆಕ್ಕಪತ್ರ ಮಂಡಿಸಿದರು. ರಂಗ ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-687463432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.