ಬಂಟ್ವಾಳ: ಇಲ್ಲಿನ ಪುಣಚ ಗ್ರಾಮದ 3ನೇ ವಾರ್ಡ್ನ ದೇವಿನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಮೂರು ಕುಟುಂಬಗಳು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಇವರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಬಿ.ಸಿ.ರೋಡು ಆಡಳಿತ ಸೌಧ ಎದುರು ನಡೆಯುತ್ತಿರುವ ಪ್ರತಿಭಟನೆಯು ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಧರಣಿಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಸತೀಶ್ ಕುಂಪಲ ಭಾಗವಹಿಸಿ ಪ್ರತಿಭಟನಕಾರರಿಗೆ ಬೆಂಬಲ ಸೂಚಿಸಿದರು.

ಮೇ 18ರಂದು ಬೆಳಿಗ್ಗೆ ಈ ಮೂರು ಕುಟುಂಬಗಳಿಗೆ ಹಕ್ಕುಪತ್ರ ಕೊಡುವುದಾಗಿ ತಹಶೀಲ್ದಾರ್ ಜಿ.ಮಂಜುನಾಥ್ ಅವರು ತಿಳಿಸಿದ ಕಾರಣ ಫಲಾನುಭವಿಗಳು ಕಚೇರಿಗೆ ಬಂದಾಗ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ಧರಣಿ ಆರಂಭಿಸಲಾಗಿತ್ತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಅಲ್ಲಿನ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ನೀಡುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಹಕ್ಕುಪತ್ರ ನೀಡಿಲ್ಲ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದ್ದರು.

ಈ ನಡುವೆ, ‘ನಮಗೆ ಇಲ್ಲೇ ಹಕ್ಕುಪತ್ರ ನೀಡಬೇಕು’ ಎಂದು ಆಗ್ರಹಿಸಿ ಮೂರು ಕುಟುಂಬಗಳ ಸದಸ್ಯರು ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ ಬಳಿಕ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಪುತ್ತೂರು ಮತ್ತು ಬಂಟ್ವಾಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಅರ್ಹ ಕುಟುಂಬಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಹಕ್ಕುಪತ್ರ ನೀಡದೆ ಶಾಸಕ ಅಶೋಕ್ ಕುಮಾರ್ ರೈ ಮತ್ತು ಸರ್ಕಾರ ಸತಾಯಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಕಾರರು, ಅಶೋಕ್ ಕುಮಾರ್ ರೈ ವಿರುದ್ಧ ಧಿಕ್ಕಾರ ಕೂಗಿದರು.

ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಆರ್. ಚೆನ್ನಪ್ಪ ಕೋಟ್ಯಾನ್, ದಯಾನಂದ ಶೆಟ್ಟಿ ಉಜ್ರಿಮಾರ್, ಪಿ.ಬಿ.ಶಿವಕುಮಾರ್, ಜಗದೀಶ್ ಆಳ್ವ ಕುವೆತ್ತಬೈಲು, ರಾಮದಾಸ್ ಬಂಟ್ವಾಳ, ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ಮಾಧವ ಮಾವೆ, ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ಸನ್ನತ್ ಮಾಡ್ತಾ, ಮುರಳಿಕೃಷ್ಣ ಹಸಂತಡ್ಕ, ದಿನೇಶ್ ಅಮ್ಟೂರು, ಎ. ಗೋವಿಂದ ಪ್ರಭು, ದೇವಪ್ಪ ಪೂಜಾರಿ, ವಸಂತ ಕುಮಾರ್ ಅಣ್ಣಳಿಕೆ, ಪ್ರಭಾಕರ ಪ್ರಭು, ಪುರುಷೋತ್ತಮ ಸಾಲ್ಯಾನ್, ಮಂಜುಳಾ ರಾವ್, ಸುಮಿತ್ರಾ ಕರಿಯ, ಹರೀಶ್ ಬಿಜೆತ್ರೆ, ಹರೀಶ್ ಶೆಟ್ಟಿ ಪಡು, ಯಶೋಧರ ಕರ್ಬೆಟ್ಟು, ದಯಾನಂದ ತೊಕ್ಕೊಟ್ಟು, ಮಹೇಶ್ ಜೋಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-29-799036444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.