ಬಂಟ್ವಾಳ: ‘ಸಮಾಜ ಪ್ರತಿಯೊಬ್ಬರೂ ಧರ್ಮದ ತಿರುಳನ್ನು ಅರಿತು ಸಾತ್ವಿಕರಾದರೆ ಮಾತ್ರ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ’ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ಸಮನ್ವಯಕ ಚಂದ್ರ ಮೊಗವೀರ ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಇಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಅವರು ಮಾತನಾಡಿದರು.

‘ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲ ಹಿಂದೂ ಸಂಘಟನೆಗಳು ಒಮ್ಮನಸ್ಸಿನಿಂದ ಕೆಲಸ ಮಾಡಬೇಕಿದೆ. ಧರ್ಮ ಕಾರ್ಯದ ಹಾದಿಯಲ್ಲಿ ಎದುರಾಗುವ ಅಡೆತಡೆ ನಿವಾರಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.

‘ಪ್ರೀತಿ-ಪ್ರೇಮದ ನಾಟಕವಾಡಿ ಹಿಂದೂ ಹೆಣ್ಣು ಮಕ್ಕಳನ್ನು ಮತಾಂತರದ ಮಾಯಾ ಜಾಲಕ್ಕೆ ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ವೀರ ವನಿತೆಯರ ಕುರಿತು ಮಾರ್ಗದರ್ಶನ ಇಲ್ಲದಿರುವುದೂ ಇದಕ್ಕೆ ಕಾರಣ. ಸ್ವಯಂ ರಕ್ಷಣೆ ಮಾಡಿಕೊಳ್ಳುವುದನ್ನು ಅವರಿಗೆ ಕಲಿಸಬೇಕು’ ಎಂದು ವಕೀಲ ಪ್ರಸಾದ್ ರೈ ಹೇಳಿದರು.

‘ದೇಶ ಮತ್ತು ಧರ್ಮದ ರಕ್ಷಣೆಗಾಗಿ ಕುಟುಂಬದ ರಕ್ಷಣೆಯೂ ಮುಖ್ಯ. ಮನೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಸತ್ ಕುಟುಂಬದಿಂದಲೇ ಉತ್ತಮ ರಾಷ್ಟ್ರದ ಸ್ಥಾಪನೆ ಸಾಧ್ಯ’ ಎಂದು ಗುರುಪುರ ವಜ್ರದೇಹಿಮಠದ ಪೀಠಾಧಿಪತಿ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಉದ್ಯಮಿ ಅಜಯ್ ಶೆಟ್ಟಿ , ವಕೀಲ ಜಗದೀಶ ಶೇಣವ, ಪ್ರಮುಖರಾದ ಸಾಂತಪ್ಪ ಗೌಡ, ಪ್ರಭಾಕರ ಪ್ರಭು, ರಾಧಾಕೃಷ್ಣ ಅಡ್ಯಂತಾಯ, ಅಳಿಕೆ ಉಳಿಯ ವೈಷ್ಣವಿ ಕ್ಷೇತ್ರದ ಶಿವಾನಂದ ಸರಸ್ವತಿ ಸ್ವಾಮೀಜಿ, ರಾಜ ರಾಮ್ ಭಟ್ ಮತ್ತಿತರರು ಭಾಗವಹಿಸಿದ್ದರು.

ಸುಧಾ ತಲಪಾಡಿ ಹಾಗೂ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1198358416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.