ಬಂಟ್ವಾಳ: ಇಲ್ಲಿನ ಸಜೀಪಮೂಡ ಗ್ರಾಮದ ಪಂಜಾಜೆ ಕೊಳಕೆ ಎಂಬಲ್ಲಿ ಅಕ್ರಮವಾಗಿ ಜಾನುವಾರು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ನಗರ ಠಾಣೆ ಪೊಲೀಸರು ಬುಧವಾರ ರಾತ್ರಿ ದಾಳಿ ನಡೆಸಿದ್ದಾರೆ.

ಆರೋಪಿಗಳಾದ ಸ್ಥಳೀಯ ನಿವಾಸಿ ಮುಸ್ತಫಾ (33) ಮಹಮ್ಮದ್ ಸಾದೀಕ್ (30) ಎಂಬುವರನ್ನು ಬಂಧಿಸಲಾಗಿದೆ.

ಅವರು ಮನೆಯೊಂದರ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅವರಿಂದ ಐದು ಜಾನುವಾರು ಮತ್ತು ಒಂದು ಕರು ಸಹಿತ ಸುಮಾರು 31 ಕೆ.ಜಿ. ಮಾಂಸ, 40 ಕೆ.ಜಿ ತುಂಡರಿಸಿದ ಮಾಂಸ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಕಾರು, ಮಾಂಸ ಕತ್ತರಿಸುವ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನಿಬ್ಬರು ಆರೋಪಿಗಳಾದ ಜಾಫರ್ ಮತ್ತು ಅಸ್ಪಾಕ್ ಪರಾರಿಯಾಗಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-810926355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.