ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಅಡಚಣೆ ಉಂಟಾಗುತ್ತಿರುವುದು ಯಾಕೆ ಎಂಬುದರ ಬಗ್ಗೆ ಸಮಗ್ರ ವರದಿ ನೀಡಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿ.ಸಿ.ರೋಡು ತಾಲ್ಲೂಕು ಪಂಚಾ ಯಿತಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಇಲ್ಲಿನ ಗೋಳ್ತಮಜಲು, ಬಾಳ್ತಿಲ ಸಹಿತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಗಮನಕ್ಕೆ ತರಬೇಕು. ಪ್ರತಿ ಗ್ರಾಮಾಡಳಿತ ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ಲಭ್ಯವಿರುವ ಅನುದಾನ ಬಳಸಿಕೊಂಡು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ತಹಶೀಲ್ದಾರ್ ಕೆ.ಮಂಜುನಾಥ್, ತಾಪಂ ಇಒ ಸಚಿನ್ ಕುಮಾರ್, ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-506687273

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.