ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

362 ಫಲಾನುಭವಿಗಳಿಗೆ ಸವಲತ್ತು ವಿತರಣೆ

ಪೊಳಲಿ: ಜನಸ್ಪಂದನ ಕಾರ್ಯಕ್ರಮ
Last Updated 2 ಡಿಸೆಂಬರ್ 2022, 6:41 IST
ಅಕ್ಷರ ಗಾತ್ರ

ಬಂಟ್ವಾಳ: ‘ಜನರ ಬಳಿಗೆ ನೇರವಾಗಿ ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ತೆರಳಿ ಜನರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ’ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಇಲ್ಲಿನ ಪೊಳಲಿ ಸಭಾಂಗಣಲ್ಲಿ ಗುರುವಾರ ನಡೆದ ಸಜಿಪಮುನ್ನೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಡಾ.ಸ್ಮಿತಾ ರಾಮು ಮಾತನಾಡಿದರು. ಕರಿಯಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಅಮ್ಮುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಾಮನ ಆಚಾರ್ಯ, ಅಮ್ಟಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೋಹಿನಿ ನಾಯ್ಕ್, ಬಡಗಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಆಳ್ವ, ಕಳ್ಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ, ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಆರೋಗ್ಯಾಧಿಕಾರಿ ಡಾ.ಅಶೋಕ್, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಬಿಂದಿಯಾ, ಕೃಷಿ ಅಧಿಕಾರಿ ನಂದನ್ ಶೆಣೈ, ವೀಣಾ ಇದ್ದರು. ಒಟ್ಟು 362 ಫಲಾನುಭವಿಗಳಿಗೆ ವಿವಿಧ ಇಲಾಖೆಯಡಿ ಮಂಜೂರಾತಿ ಆದೇಶ ಪತ್ರ, ಮತ್ತಿತರ ಸವಲತ್ತು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT