ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಡ್ಕ ಕುದ್ರೆಬೆಟ್ಟು ಎಂಬಲ್ಲಿ ಖಾಸಗಿ ಬಸ್ನಲ್ಲಿ ಪ್ರಯಾಣಿಕರೊಬ್ಬರು ಇಟ್ಟಿದ್ದ ₹ 20 ಲಕ್ಷ ಮೌಲ್ಯದ ಚಿನ್ನಾಭರಣ ಇದ್ದ ಬ್ಯಾಗ್ ಕಸಿದು ಪರಾರಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಧ್ಯಪ್ರದೇಶದ ಧಾರಾ ಜಿಲ್ಲೆ ನಿವಾಸಿ ಸಮದ್ ಖಾನ್ ಆರೋಪಿ. ಆತನಿಂದ ₹ 20ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 2025ರ ನ.19ರಂದು ಬ್ರಹ್ಮಾವರ ಮೂಲದ ದಂಪತಿ ಖಾಸಗಿ ಬಸ್ನಲ್ಲಿ ಚಿನ್ನಾಭರಣ ಇದ್ದ ಬ್ಯಾಗ್ ಇಟ್ಟು ಪಕ್ಕದ ಹೋಟೆಲ್ಗೆ ತೆರಳಿದ್ದ ವೇಳೆ ಕಳವು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮ ನಿರ್ದೇಶನದಂತೆ ತನಿಖಾಧಿಕಾರಿಯಾಗಿ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಕೆ.ವಿ., ಪಿಎಸ್ಐ ಸಂದೀಪ್ ಕುಮಾರ್ ಶೆಟ್ಟಿ, ಸಿಬ್ಬಂದಿ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಬಸವರಾಜ, ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ, ಸಂಪತ್ ಕುಮಾರ್, ದಿವಾಕರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.