ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ರಾಜ್ಯ ಹೆದ್ದಾರಿ ಬದಿಯಲ್ಲಿ ಮಳೆಗಾಲಕ್ಕೆ ಮುಂಚಿತವಾಗಿ ಚರಂಡಿ ಹೂಳೆತ್ತಬೇಕು. ರಸ್ತೆಗೆ ಬಾಗಿರುವ ಮರ ಗಿಡಗಳ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ನ ನಿಯೋಗವು ಬಂಟ್ವಾಳದ ಲೋಕೋಪಯೋಗಿ ಇಲಾಖೆ ಕಚೇರಿಗೆ ಗುರುವಾರ ಮನವಿ ಸಲ್ಲಿಸಿದೆ.

₹5.50 ಕೋಟಿ ವೆಚ್ಚದಲ್ಲಿ ಅಣ್ಣಳಿಕೆ-ರಾಯಿ ಮತ್ತು ಕುದ್ಕೋಳಿ-ಮಾಡಮೆ ನಡುವಿನ 16 ಕಿ.ಮೀ. ರಸ್ತೆ ವಿಸ್ತರಣೆ ಮತ್ತು ಡಾಂಬರೀಕರಣಗೊಂಡಿದ್ದು, ಕೆಲವೆಡೆ ಚರಂಡಿ ಸಂಪೂರ್ಣ ಮುಚ್ಚಲಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಚರಂಡಿ ಇಲ್ಲದೆ ಮಳೆ ಮತ್ತು ಕೆಸರು ನೀರು ರಸ್ತೆಯಲ್ಲೇ ಹರಿದು ರಸ್ತೆ ಹದಗೆಡುತ್ತದೆ ಎಂದು ಸದಸ್ಯರು ಆರೋಪಿಸಿದರು.

ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವಿನಾಶ್ ಬಿ. ಮಾತನಾಡಿ, ‘ಕೆಲವೊಂದು ರಸ್ತೆ ಬದಿ ಚರಂಡಿ ಹೂಳೆತ್ತುವ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಬಂಟ್ವಾಳ -ಮೂಡುಬಿದಿರೆ ರಸ್ತೆ ನಡುವಿನ ಅಣ್ಣಳಿಕೆ ಎಂಬಲ್ಲಿ ರಸ್ತೆ ಬದಿ ಚರಂಡಿ ಪುನರ್ ರಚನೆ ಮಾಡಲಾಗುವುದು. ಹೂಳೆತ್ತುವುದರ ಜೊತೆಗೆ ರಸ್ತೆ ಬದಿ ಮರ ಗಿಡಗಳ ಬಳ್ಳಿ ಮತ್ತು ಕೊಂಬೆಗಳನ್ನು ತೆರವುಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ಕ್ಲಬ್ ಅಧ್ಯಕ್ಷ ವಿಜಯ ಫರ್ನಾಂಡಿಸ್, ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ, ಮಾಜಿ ಅಧ್ಯಕ್ಷರಾದ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಆಂಟೋನಿ ಸಿಕ್ವೇರಾ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಸದಸ್ಯರಾದ ಐವನ್ ಮಿನೇಜಸ್, ಪ್ರೀತಂ ರಾಡ್ರಿಗಸ್, ರುಡಾಲ್ಫ್, ದೇವಾನಂದ ನಿಯೋಗದಲ್ಲಿ ಪಾಲ್ಗೊಂಡಿದ್ದರು. ಸಹಾಯಕ ಎಂಜಿನಿಯರ್ ಅರುಣ್ ಪ್ರಕಾಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-29-1905741786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.