ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಎಂಬಲ್ಲಿ ಯುವಕನೊಬ್ಬ ಬಿಯರ್ ಬಾಟಲಿಯಿಂದ ಇರಿದು ಸ್ವಂತ ಚಿಕ್ಕಪ್ಪನನ್ನೇ ಹತ್ಯೆ ಮಾಡಿದ್ದಾನೆ.

ಪಿಲಾತಬೆಟ್ಟುವಿನ ಮಧುಸೂದನ (37) ಕೊಲೆಯಾದವರು. ಅವರ ಅಣ್ಣ ಕೇಶವ ಅವರ ಮಗ ರಾಹುಲ್ ಕೊಲೆ ಆರೋಪಿ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಮಧುಸೂದನ ಅವರ ಕುಟುಂಬದಲ್ಲಿ ಭಾನುವಾರ ರಾತ್ರಿ ಧಾರ್ಮಿಕ ಕಾರ್ಯಕ್ರಮವಿತ್ತು. ಇದಕ್ಕೆ ಕುಟುಂಬಸ್ಥರೆಲ್ಲ ಸೇರಿದ್ದರು. ಈ ವೇಳೆ ಮಧುಸೂದನ್ ಅವರು ಅಣ್ಣನ ಮಗ ರಾಹುಲ್ ಕೆಲಸದ ವಿಚಾರದಲ್ಲಿ ತಕರಾರು ತೆಗೆದಿದ್ದರು. ಇದರಿಂದ ಸಿಟ್ಟಾಗಿದ್ದ ಆರೋಪಿ ರಾಹುಲ್ ಮನೆಯಿಂದ ತೆರಳಿದ್ದ. ಕಾರ್ಯಕ್ರಮ ಮುಗಿದ ಕೆಲ ಹೊತ್ತಿನಲ್ಲಿ ಆರೋಪಿ ರಾಹುಲ್ ಬಿಯರ್ ಬಾಟಲಿಯಿಂದ ಮಧುಸೂದನ ಅವರ ಕುತ್ತಿಗೆಗೆ ತಿವಿದಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಮಧುಸೂದನ ಅವರು ಚೀರಾಟ ಕೇಳಿ ಕುಟುಂಬದವರು ಸ್ಥಳಕ್ಕೆ ಧಾವಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಈ ಬಗ್ಗೆ ಮೃತ ವ್ಯಕ್ತಿಯ ಸಹೋದರ ಶೇಖರ ಎಂಬುವರು ದೂರು ನೀಡಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.