ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಆ ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಇದರಿಂದಾಗಿ ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆ ಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮತ್ತು ಬಂಟ್ವಾಳ - ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡು ಆಡಳಿತ ಸೌಧ ಎದುರು ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ನಾಯಕರು ಸುಳ್ಳು ಪ್ರಚಾರವನ್ನೇ ಬಂಡವಾಳ ಮಾಡಿಕೊಂಡು ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೇ ಸುಮಾರು ₹ 5,000 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದರು.

ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಕೇವಲ ನಾಟಕೀಯ ಭಾಷಣ ಮತ್ತು ವಿದೇಶ ಪ್ರಯಾಣ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯು ಶಿಕ್ಷಣ ವ್ಯವಸ್ಥೆ ಮೇಲಿನ ವಿಶ್ವಾಸಕ್ಕೆ ಧಕ್ಕೆ ತಂದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ತಾಂತ್ರಿಕ ಲೋಪಗಳಿಂದ ಅರ್ಹ ಮತದಾರರ ಹೆಸರುಗಳು ಕೈಬಿಡುವ ಸಾಧ್ಯತೆ ಇದೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಇರಬೇಕು. ಈಚೆಗೆ ಶೃಂಗೇರಿ ವಿಧಾನಸಭೆ ಚುನಾವಣೆಯ ಮರು ಮತ ಎಣಿಕೆಯಲ್ಲಿ ಮತ ಕಳವು ನಡೆದಿರುವುದು ಜಗಜ್ಜಾಹೀರಾತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್.ಗಟ್ಟಿ, ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್ ಮಾತನಾಡಿದರು.

ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಬಿ.ಪದ್ಮಶೇಖರ್ ಜೈನ್, ಬೇಬಿ ಕುಂದರ್, ಪಿ.ವಿ.ವರ್ಗೀಸ್, ಶಾಹುಲ್ ಹಮೀದ್, ಸರ್ವೋತ್ತಮ ಗೌಡ ನೆಲ್ಯಾಡಿ, ದಿನೇಶ್ ಮೂಳೂರು, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಅರುಣ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ರಾಧಾಕೃಷ್ಣ ಬೊಲ್ಲೂರು, ಅಭಿಲಾಷ್ ಪಿ.ಕೆ., ಪ್ರಶಾಂತ್ ಕಾಜವ, ರಮೇಶ್ ಶೆಟ್ಟಿ, ಉಮೇಶ್ ಬೋಳಂತೂರು, ನವಾಜ್ ಬಡಕಬೈಲು, ಕುಮಾರಿ ಅಪ್ಪಿ, ಉಷಾ ಅಂಚನ್, ಜಯಂತಿ ಪೂಜಾರಿ, ಸುಧೀರ್ ಕುಮಾರ್ ಶೆಟ್ಟಿ, ಐಡಾ ಸುರೇಶ್, ಶೈಲಜಾ ರಾಜೇಶ್, ಚಿತ್ತರಂಜನ್ ಶೆಟ್ಟಿ, ಜಗದೀಶ ಕುಂದರ್, ಅಬ್ದುಲ್ ರಹಿಮಾನ್ ಭಾಗವಹಿಸಿದ್ದರು.

ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಜಗದೀಶ್ ಕೊಯಿಲ ಸ್ವಾಗತಿಸಿ, ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಪ್ರಾಸ್ತಾವಿಕವಾಗಿ ಮಾತನಾಡಿದರು. ವೃಂದಾ ಪೂಜಾರಿ ವಂದಿಸಿದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-1383011840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.