ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಯಿಲ ಸರ್ಕಾರಿ ಪ್ರೌಢಶಾಲೆ: ಹರ್ ಘರ್ ಜಲ್ ಉತ್ಸವಕ್ಕೆ ಚಾಲನೆ

Last Updated 8 ಆಗಸ್ಟ್ 2022, 14:11 IST
ಅಕ್ಷರ ಗಾತ್ರ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ಮುಂಬರುವ 2024ರೊಳಗೆ ದೇಶದ ಪ್ರತಿ ಮನೆಗೆ ಪರಿಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ‘ಹರ್ ಘರ್ ಜಲ್ ಉತ್ಸವ’ ಮನೆಮನೆಗೆ ಗಂಗೆ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿಗೆ ಕಿಂಡಿ ಅಣೆಕಟ್ಟೆ ನಿರ್ಮಾಗೊಂಡ ಪರಿಣಾಮ ₹ 34 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಕ್ಕೆ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಹಿತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬಂಟ್ವಾಳ ಉಪ ವಿಭಾಗ, ತಾಲ್ಲೂಕು ಪಂಚಾಯಿತಿ ಮತ್ತು ರಾಯಿ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾ ಆನಂದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ಅರ್ಹ ಪಂಚಾಯಿತಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಬಂಟ್ವಾಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಕೆ.ನಾಯ್ಕ್ ಪ್ರಾಸ್ತಾವಿಕ ಮಾತನಾಡಿದರು. ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು, ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಎಂಜಿನಿಯರ್ ಅಜಿತ್ ಕೆ.ಎನ್, ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಮತ್ತು ರವೀಂದ್ರ ಪೂಜಾರಿ, ಮುಖ್ಯಶಿಕ್ಷಕ ಸಿಪ್ರಿಯನ್ ಡಿಸೋಜ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ನರಿಕೊಂಬು ಪಂಚಾಯಿತಿ ಅಧ್ಯಕ್ಷೆ ವಿನಿತಾ ನಾಯ್ಕ್, ಸಂಗಬೆಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ ಹಲಕ್ಕೆ, ಅರಳ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಕಾವಳಪಡೂರು ಪಂಚಾಯಿತಿ ಅಧ್ಯಕ್ಷೆ ರಜನಿ ಕುಲಾಲ್, ಪಿಡಿಒ ಮಧು ಟಿ.ಎಲ್., ಯೋಜನಾ ವ್ಯವಸ್ಥಾಪಕ ವಿಘ್ನೇಶ್ ರಾಜ್, ಎಂಜಿನಿಯರ್ ನಾಸಿರ್, ಚರಣ್ ರಾಜ್, ಎಂಜಿನಿಯರ್ ಕೃಷ್ಣ ಆಚಾರ್ಯ, ಜಗದೀಶ್ ನಿಂಬಳ್ಕರ್, ವಿಲ್ಮಾ, ಗುಣವತಿ, ಚಂದ್ರಶೇಖರ್ ಇದ್ದರು.

ರಾಯಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ವಂದಿಸಿದರು. ದಿನೇಶ್ ಸುವರ್ಣ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT