ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಮೂರ್ತೆ ದಾರರ ಸೇವಾ ಸಹಕಾರಿ ಸಂಘದ ಶಿರ್ತಾಡಿ ಮಕ್ಕಿ ಪ್ರೌಢಶಾಲೆ ಬಳಿ ಯಿರುವ ಸಂಘದ 18ನೇ ಶಾಖೆಯನ್ನು ಮೇ 3ರಂದು ಬೆಳಿಗ್ಗೆ 10ಕ್ಕೆ ಮುಖಂಡ ಬಿ. ರಮಾನಾಥ ರೈ ಉದ್ಘಾಟಿಸುವರು.

ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸೋಮನಾಥ ಶಾಂತಿ, ಮಾಜಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ ಕಾಶಿಪಟ್ನ, ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ್, ಗ್ರಾ.ಪಂ. ಮಾಜಿ ಅಧ್ಯಕ್ಷ ಫೆಡ್ರಿಕ್ ಪಿಂಟೊ, ನವ ಮೈತ್ರಿ ಸೌಹಾರ್ದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ವಿ. ಶೆಟ್ಟಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕಟ್ಟಡ ಮಾಲೀಕ ರತ್ನಾಕರ ಬುಣ್ಣನ್, ಮಹಮ್ಮದ್ ದೋಣಿಬಾಗಿಲು ಭಾಗವಹಿಸುವರು.

ಮೂರ್ತೆದಾರಿಕೆ ಕುಲ ಕಸುಬುದಾರರ ಶ್ರೇಯೋಭಿವೃದ್ಧಿಗಾಗಿ 1991ರಲ್ಲಿ ಸಂಘ ಆರಂಭಗೊಂಡಿತು. ಸಿದ್ದಕಟ್ಟೆ, ಬಿ.ಸಿ.ರೋಡು ಶಾಖೆಯಲ್ಲಿ ಇ– ಸ್ಟ್ಯಾಂಪಿಂಗ್ ಸೌಲಭ್ಯವಿದೆ. ಸಂಘವು ಗುರುಶ್ರೀ ಹೆಸರಿನಲ್ಲಿ ಸ್ವಸಹಾಯ ಗುಂಪು ರಚಿಸಿದ್ದು, ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ, ಬಡವರು, ಅನಾರೋಗ್ಯ ಪೀಡಿತ ಮೂರ್ತೆದಾರರಿಗೆ ಸಹಾಯಧನ, ಹಿರಿಯ ಮೂರ್ತೆದಾರರಿಗೆ ಸನ್ಮಾನ ಮಾಡುತ್ತಿದೆ. ಸಂಘದ ಯಶಸ್ಸಿಗೆ ಸಿಬ್ಬಂದಿ ಜೊತೆಗೆ ಅಧ್ಯಕ್ಷ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷ ವಿಠಲ ಬೆಳ್ಚಡ, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪ್ಪಾಡಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ. ಸುಜಾತ ಎಂ, ವಾಣಿ ವಸಂತ, ಆಶಿಶ್ ಪೂಜಾರಿ, ಚಿದಾನಂದ ಎಂ. ಕಡೇಶ್ವಾಲ್ಯ, ಎಂ.ಕೆ. ಪ್ರಸಾದ್ ಶ್ರಮಿಸುತ್ತಿದ್ದಾರೆ ಎಂದು ಸಂಘದ ಇಒ ಮಮತಾ ಜಿ. ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-29-125084316

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.