ಬಂಟ್ವಾಳ: ಇಲ್ಲಿನ ಕಾವಳ ಮೂಡೂರು, ಬಡಗ ಕಜೆಕಾರು ಮತ್ತಿತರ ಕಡೆಗಳಲ್ಲಿ ಶನಿವಾರ ರಾತ್ರಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ಅಪಾರ ಪ್ರಮಾಣದ ನಷ್ಟು ಉಂಟಾಗಿದೆ. ತಾಲ್ಲೂಕಿನಲ್ಲಿ ಒಟ್ಟು 86 ಮನೆಗಳಿಗೆ ಹಾನಿಯಾಗಿದೆ.
100ಕ್ಕೂ ಅಧಿಕ ಅಡಿಕೆ ಮರಗಳು, 25ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಬಡಗ ಕಜೆಕಾರು ನಿವಾಸಿ ರವಿ ಸಾಲ್ಯಾನ್ ಎಂಬುವವರಿಗೆ ಸೇರಿದ್ದ 200 ರಬ್ಬರ್ ಗಿಡಗಳಿಗೆ ಹಾನಿ ಆಗಿದೆ.
ನರಿಕೊಂಬು ಗ್ರಾಮದ ನಾಯಿಲ ನಿವಾಸಿ ನಳಿನಿ ಉಮೇಶ ಅವರ ಮನೆಯ ಆವರಣ ಗೋಡೆಗೆ ಸಿಡಿಲು ಬಡಿದು ಹಾನಿ ಉಂಟಾಗಿದೆ. ಉಳಿ ಗ್ರಾಮದ ಗುಂಡಿದೊಟ್ಟು ಗಣೇಶ ಪೂಜಾರಿ ಅವರ ಮನೆ ಚಾವಣಿಗೆ ಹಾನಿ ಉಂಟಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಧಾರಾಕಾರ ಮಳೆ: ಹಾಸನ ನಗರದಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಎಂ.ಜಿ.ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಉರುಳಿದ್ದು, ಕಾರು ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಯ್ಸಳ ನಗರದಲ್ಲಿ ಅನೇಕ ಮನೆಗಳ ಒಳಗೆ ಮಳೆ ನೀರು ನುಗ್ಗಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.