ಬಂಟ್ವಾಳ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಪ್ರೌಢಶಾಲೆಗಳಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಮೇ 15ರಿಂದ 28ರವರೆಗೆ ಮಕ್ಕಳ ದಾಖಲಾತಿ ಆಂದೋಲನ ಆರಂಭಿಸುವ ಮೂಲಕ ಜಾಗೃತಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಾಲತಿ ಹೇಳಿದರು.

ಬಿ.ಸಿ.ರೋಡಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 15ರಂದು ಬ್ಲಾಕ್ ಮಟ್ಟ, 18ರಂದು ಹೋಬಳಿ, 20ರಂದು ಕ್ಲಸ್ಟರ್ ಮಟ್ಟದಲ್ಲಿ ಆಂದೋಲನ ಆಯೋಜಿಸಲಾಗಿದೆ. ತಾಲ್ಲೂಕಿನಲ್ಲಿ ಒಟ್ಟು 42 ಕಿರಿಯ, 152 ಹಿರಿಯ ಮತ್ತು 39 ಪ್ರೌಢಶಾಲೆ ಸೇರಿದಂತೆ ಒಟ್ಟು 233 ಸರ್ಕರಿ ಶಾಲೆಗಳಿದ್ದು, ಶಿಕ್ಷಕರ ಕೊರತೆ ಇದ್ದರೆ ಗೌರವ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ ಎಂದರು.

ತಾಲ್ಲೂಕಿನಲ್ಲಿ 6 ಪಿಎಂಶ್ರೀ ಶಾಲೆ, ಎರಡು ಕೆಪಿಎಸ್ ಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ವಾಮದಪದವು, ಸಿದ್ಧಕಟ್ಟೆ, ಕುರ್ನಾಡು ಮತ್ತು ಕನ್ಯಾನ ಶಾಲೆಗಳಲ್ಲಿ ಕೌಶಲಾಧಾರಿತ (ಎನ್ಎಸ್ಕ್ಯೂಎಫ್) ಶಿಕ್ಷಣ ನೀಡಲಾಗುತ್ತಿದೆ. 10 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಒಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಸ್ವೀಕರಿಸಲಾಗಿದ್ದು, ವಿಟ್ಲ ಮತ್ತು ದಡ್ಡಲಕಾಡು ಸರ್ಕಾರಿ ಪ್ರೌಢಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇ.ಒ.ಸಚಿನ್ ಕುಮಾರ್ ಮಾತನಾಡಿ, ಖಾಸಗಿ ಶಾಲೆಗಳ ಅಬ್ಬರದ ಪ್ರಚಾರದ ನಡುವೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳು ಮುಚ್ಚದಂತೆ ಶೈಕ್ಷಣಿಕ ಸಾಧನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲು ಸರ್ಕಾರ ಮುಂದಾಗಿದೆ ಎಂದರು.

ಬಿ.ಆರ್.ಸಿ. ಸಮನ್ವಯಾಧಿಕಾರಿ ವಿದ್ಯಾ, ಜಿಲ್ಲಾ ಡಯೆಟ್ ಉಪನ್ಯಾಸಕಿ ಫಾತಿಮ ಬಿ., ಪ್ರಮುಖರಾದ ರಮಾನಂದ, ಪ್ರತಿಮಾ, ಸುಧಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-1179505275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.