ಬಂಟ್ವಾಳ: ಕೋಮು ಸಂಘರ್ಷ ಮತ್ತು ಅಮಾಯಕರ ಹತ್ಯೆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಿಗೆ ಕಳಂಕ ತರುತ್ತಿರುವ ಆರೋಪಿಗಳು ಮತ್ತು ಅವರಿಗೆ ಕುಮ್ಮಕ್ಕು ನೀಡುತ್ತಿರುವ ಸೂತ್ರಧಾರಿಗಳಿಗೆ ಕಠಿಣ ಶಿಕ್ಷೆ ಕಾದಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎಚ್ಚರಿಸಿದರು.

ಈಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪಿಕಪ್ ಚಾಲಕ ರಹಿಮಾನ್ ಅವರ ಮನೆಗೆ ಗುರುವಾರ ಸಂಜೆ ಭೇಟಿ ನೀಡಿ ಅವರು ಮನೆಯವರ ಜೊತೆ ಮಾತುಕತೆ ನಡೆಸಿದರು. ಈಗಾಗಲೇ ಜಿಲ್ಲೆಗೆ ದಕ್ಷ ಪೊಲೀಸರನ್ನು ನಿಯೋಜಿಸಲಾಗಿದ್ದು, ಅವರು ಪಾರದರ್ಶಕವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವರು ಎಂದರು. ಮೃತರ ತಂದೆ ಅಬ್ದುಲ್ ಖಾದರ್ ಮಾತನಾಡಿ, ನನ್ನ ಮಗನಿಗೆ ಆದಂತಹ ಸಾವು ಯಾರಿಗೂ ಬಾರದಂತೆ ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಬೂಡ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಶಾಹುಲ್ ಹಮೀದ್, ಚಂದ್ರಪ್ರಕಾಶ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಕೆ.ಪದ್ಮನಾಭ ರೈ, ಉಲ್ಲಾಸ್ ಕೋಟ್ಯಾನ್, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪದ್ಮನಾಭ ಪೂಜಾರಿ, ಎಂ.ಎ.ಗಫೂರ್, ಡಾ.ರಾಜಾರಾಮ್ ಉಪ್ಪಿನಂಗಡಿ, ಲುಕ್ಮಾನ್ ಬಂಟ್ವಾಳ, ಜಯವಿಕ್ರಂ ಬೆಳ್ತಂಗಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.