ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹50ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
2022ನೇ ಸಾಲಿನ ಗೌರವ ಪ್ರಶಸ್ತಿಗೆ ಬೆಂಗಳೂರಿನ ಹಂಝತ್ ಉಲ್ಲಾ ಕುವೇಂಡ (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಯಿಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಆಯ್ಕೆಯಾಗಿದ್ದಾರೆ.
2023ನೇ ಸಾಲಿನ ಪ್ರಶಸ್ತಿಗೆ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಅಕಾಡೆಮಿಯ ಅಧ್ಯಕ್ಷ ಉಮರ್ ಯು. ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.