ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಡಿಲ ಹುಸೈನ್, ಮೈಮುನಾಗೆ ವರ್ಷದ ಬ್ಯಾರಿ ಪ್ರಶಸ್ತಿ

Published 4 ಜೂನ್ 2024, 3:18 IST
Last Updated 4 ಜೂನ್ 2024, 3:18 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ ಅವರು 2024ನೇ ಸಾಲಿನ ‘ವರ್ಷದ ಬ್ಯಾರಿ’ ಹಾಗೂ 75ಕ್ಕೂ ಹೆಚ್ಚು ಹಸುಗಳನ್ನು ಸಾಕಿ ಯಶಸ್ವಿ ಹೈನೋದ್ಯಮಿಯಾಗಿರುವ ಹರೇಕಳದ ಮೈಮುನಾ- ಮರ್ಜೀನ ಅವರು ‘ವರ್ಷದ ಬ್ಯಾರ್ದಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಫಲಕ, ಸನ್ಮಾನ ಪತ್ರವನ್ನು ಒಳಗೊಂಡಿದೆ. ಜೂನ್ 9ರಂದು ಬೆಂಗಳೂರಿನ ಎಚ್‌ಬಿಆರ್‌ ಲೇಔಟ್‌ನಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬೆಂಗಳೂರಿನ ಬ್ಯಾರೀಸ್ ವೆಲ್ ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿರುವ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ತಿಳಿಸಿದ್ದಾರೆ.

ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಂ.ಸಿ.ಸುಧಾಕರ್, ಬಿಡಿಎ ಅಧ್ಯಕ್ಷ, ಶಾಸಕ ಎನ್.ಎ.ಹ್ಯಾರಿಸ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಮುನಾ
ಮೈಮುನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT