ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ | ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ

Published 22 ಫೆಬ್ರುವರಿ 2024, 14:16 IST
Last Updated 22 ಫೆಬ್ರುವರಿ 2024, 14:16 IST
ಅಕ್ಷರ ಗಾತ್ರ

ಬೆಳ್ತಂಗಡಿ: ಇಲ್ಲಿಯ ಕೊಡಿಯೇಲು ಬಳಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಒಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಬೆಳಿಗ್ಗೆ ಮಚ್ಚಿನ ಕೊಡಿಯೇಲು‌ ಕ್ವಾರಿಗೆ ತಿರುಗುವ‌ ರಸ್ತೆ ಬಳಿಯ ಮರದಲ್ಲಿ ಇದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಕ್ವಾರಿಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು ಕಾರ್ಮಿಕರು, ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕ ಸೇರಿ ಆರು ಮಂದಿಗೆ ಹೆಜ್ಜೇನು ಕಚ್ಚಿದೆ.

‌ಬಳ್ಳಮಂಜ ಮೀನು ಮಾರುಕಟ್ಟೆಗೆ ಕೆಲಸಕ್ಕೆ ಬರುತ್ತಿದ್ದ ಯುವಕನಿಗೆ ಗಂಭೀರ ಗಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT