ಮಂಗಳೂರು: ಧನಶ್ರೀ (ಎಚ್.ಐ.ವಿ ಸೋಂಕಿತ ಮಹಿಳೆಯರಿಗೆ) ಮತ್ತು ಚೇತನ ಯೋಜನೆಯಡಿ (ದಮನಿತ ಮಹಿಳೆಯರಿಗೆ) ಸ್ವ ಉದ್ಯೋಗಕ್ಕೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅರ್ಹರಿಗೆ ಈ ಮಾಹಿತಿ ತಲುಪಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ ಹೇಳಿದರು.

ಸೋಮವಾರ ಇಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಗುರುತು ಚೀಟಿ ಪಡೆಯಲು ನೋಂದಾಯಿಸಿದ ಲಿಂಗತ್ವ ಅಲ್ಪಸಂಖ್ಯಾತರ ವ್ಯಕ್ತಿಗಳ ಪರಿಶೀಲನೆ ನಡೆಸಿ ಗುರುತು ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು. ಬ್ಯಾಂಕ್ ಪಾಸ್ಬುಕ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ವಿಮಾ ಯೋಜನೆಗಳನ್ನು ಅವರಿಗೆ ಒದಗಿಸಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಅವರಿಗೆ ನಿವೇಶನ ವಸತಿ ಒದಗಿಸಲು ಪ್ರಯತ್ನವಾಗಬೇಕು ಎಂದರು.

ನಗರದಲ್ಲಿ ಬೇರೆ ರಾಜ್ಯದ ಮಹಿಳೆಯರು ಲಿಂಗತ್ವ ಅಲ್ಪಸಂಖ್ಯಾತರಂತೆ ವೇಷಧರಿಸಿ ಭಿಕ್ಷಾಟನೆ, ವೇಶ್ಯಾವಾಟಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು. ಭಿಕ್ಷಾಟನೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಹೇಳಿದರು.

ಪ್ರತಿ ವಿದ್ಯಾ ಸಂಸ್ಥೆಯಲ್ಲಿ ಎಚ್ಐವಿ ಸೋಂಕಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಮಾಡಬೇಕು. ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಬೇಕು ಎಂದು ತಿಳಿಸಿದರು.

ಕೆಲಸ ನಡೆಯುವ ಸ್ಥಳಗಳಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು. ಹೋಟೆಲ್, ರೆಸ್ಟೊರೆಂಟ್ಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿಲ್ಲ ಎಂಬ ಸ್ವಯಂ ಘೋಷಣೆಯ ಫಲಕ ಹಾಕಬೇಕು. ಕೌಟುಂಬಿಕ ಹಿಂಸೆ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಣೆ ಮತ್ತು ಮಾರಾಟ, ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯಗಳ ಬಗ್ಗೆ ಪ್ರತಿ ಗ್ರಾಮಸಭೆಯಲ್ಲಿ ಚರ್ಚಿಸಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.