ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಸ್ಕ್ಯಾನಿಂಗ್ ತಾತ್ಕಾಲಿಕ ಸ್ಥಗಿತ

ಬೆಳ್ತಂಗಡಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ
Last Updated 24 ನವೆಂಬರ್ 2020, 16:33 IST
ಅಕ್ಷರ ಗಾತ್ರ

ಬೆಳ್ತಂಗಡಿ: ಇಲ್ಲಿನ ತಾಲ್ಲೂಕು ಸಕಲ ವ್ಯವಸ್ಥೆಗಳನ್ನು ಹೊಂದಿದ್ದರೂ, ಫಾರ್ಮಸಿ ವಿಭಾಗ ಮಾತ್ರ ಬಡವಾಗಿದೆ. ಮೂರು ಮಂದಿ ಅಗತ್ಯವಿದ್ದರೂ ಒಬ್ಬರೇ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್–19 ಕಾರಣಕ್ಕೆ 15 ದಿನಗಳಿಗೊಮ್ಮೆ ನಡೆಯುತ್ತಿದ್ದ ಸ್ಕ್ಯಾನಿಂಗ್ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಪ್ರಾಥಮಿಕ ಆರೋಗ್ಯ ಘಟಕವಾಗಿ, ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ, ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರದ ಮಾನ್ಯತೆ ಪಡೆದು, ಪ್ರಸ್ತುತ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆಸ್ಪತ್ರೆಯಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಕಣ್ಣಿನ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಎಲುಬು ಮತ್ತು ಕೀಳು ರೋಗ ತಜ್ಞರು, ಅರವಳಿಕೆ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು, ಮಕ್ಕಳ ತಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ದಂತ ವೈದ್ಯರ ಹುದ್ದೆ ಮಾತ್ರ ಖಾಲಿ ಇದೆ.

ಆರು ಡಯಾಲಿಸಿಸ್ ಯಂತ್ರಗಳಿದ್ದು, 60ಕ್ಕೂ ಹೆಚ್ಚು ರೋಗಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ತುರ್ತು ಚಿಕಿತ್ಸಾ ವಿಭಾಗ, ಕೋವಿಡ್ ವಾರ್ಡ್‌ಗಳು ಇವೆ. ಒಟ್ಟು 20 ಮಂದಿ ಸ್ಟಾಫ್ ನರ್ಸ್‍ಗಳು ಕಾರ್ಯದಲ್ಲಿದ್ದು, ಹೊರಗುತ್ತಿಗೆ ಆಧಾರದಲ್ಲಿ 3 ಮಂದಿ ಇದ್ದಾರೆ. ಗುತ್ತಿಗೆ ಆಧಾರದಲ್ಲಿರುವ ಮೂವರು ಸೇರಿ, ಒಟ್ಟು 4 ಮಂದಿ ಲ್ಯಾಬ್ ಟೆಕ್ನಿಷಿಯನ್ ಇದ್ದಾರೆ.

ಆಸ್ಪತ್ರೆ ಆವರಣದಲ್ಲೇ ಕ್ಯಾಂಟೀನ್ ವ್ಯವಸ್ಥೆ ಇದೆ. ಆಸ್ಪತ್ರೆಯ ಶುಚಿತ್ವವನ್ನು ಕಾಪಾಡಲು 15 ಮಂದಿ ‘ಡಿ’ ಗ್ರೂಪ್ ನೌಕರರು ಕಾರ್ಯ ನಿರ್ವಹಿಸುತಿದ್ದಾರೆ. ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಆಸ್ಪತ್ರೆ ಎರಡು ಬಾರಿ ‘ಕಾಯಕಲ್ಪ’ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕೋವಿಡ್‍ನಿಂದಾಗಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ.

ಹಲವು ತಜ್ಞ ವೈದ್ಯರು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬರುವ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾವತಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT