ಬೆಳ್ತಂಗಡಿ: 2025-26ನೇ ಸಾಲಿನ ಕಾಲೊನಿ ಅಭಿವೃದ್ಧಿ/ಪ್ರಗತಿ ಕಾಲೊನಿ ಯೋಜನೆಯಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲ ಸೌಲಭ್ಯ ಅಭಿವೃದ್ಧಿಪಡಿಸಲು ಸರ್ಕಾರ ₹ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಲಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋಣಂದೂರು ಗ್ರಾಮದ ಮಾಮುರ್ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣ ಹಾಗೂ ಕುಳ್ಳಂಜ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣಕ್ಕೆ ತಲಾ ₹ 20 ಲಕ್ಷ, ಶಕ್ತಿನಗರ ಎಎಸ್ಎಂ ಕ್ವಾರ್ಟರ್ಸ್ ಬಳಿಯಿಂದ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣಕ್ಕೆ ₹ 10 ಲಕ್ಷ, ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಯಂಗಡಿ ಮುಖ್ಯ ರಸ್ತೆಯಿಂದ ಪಾಣೂರು ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣ, ಪಾಣೂರು ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣ, ಪಿಲಿಯೂರು ಬರ್ಕದ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣಕ್ಕೆ ತಲಾ ₹ 25 ಲಕ್ಷ ಮಂಜೂರಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಂಬೇಡ್ಕರ್ ಭವನದ ಬಳಿ ಪರಿಶಿಷ್ಟ ಜಾತಿ ಕಾಲೊನಿಯ ರಸ್ತೆ ಕಾಂಕ್ರಿಟೀಕರಣಕ್ಕೆ ₹ 20 ಲಕ್ಷ, ಪೆರಾಡಿ ಗ್ರಾಮದ ಕೊಂಡ್ರಂಜೆ ಪರಿಶಿಷ್ಟ ಜಾತಿ ಕಾಲೊನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹ 25 ಲಕ್ಷ, ಗರ್ಡಾಡಿ ಗ್ರಾಮದ ರನ್ನಾಡಿ ಪಲ್ಕೆಯಿಂದ ಹಚ್ಚಾಡಿ ಪಲ್ಕೆ ರಸ್ತೆ ಕಾಂಕ್ರಿಟೀಕರಣಕ್ಕೆ ₹ 20 ಲಕ್ಷ, ಕೊಕ್ರಾಡಿ ಗ್ರಾಮದ ಮೂಡುಬೈಲು ಶಾಂತಿಚೆ ಪರಿಶಿಷ್ಟ ಜಾತಿ ಕಾಲೊನಿ ರಸ್ತೆ ಅಭಿವೃದ್ಧಿಗೆ ₹ 10 ಲಕ್ಷ ಅನುದಾನ ಮಂಜೂರಾಗಿದೆ.

ಈ ಕಾಮಗಾರಿಗಳಿಗೆ ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ಮತ್ತು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮನವಿ ಮಾಡಿದ್ದರು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-29-2043473066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.