ಬೆಳ್ತಂಗಡಿ: ಮುಂಗಾರು ಸಂದರ್ಭ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ತುರ್ತು ಪರಿಹಾರೋಪಾಯ ಕೈಗೊಳ್ಳುವ ಕುರಿತು ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿಯಲ್ಲಿ ಸೋಮವಾರ ಸಭೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ, ಮನೆ ಸಮೀಪ ಮಣ್ಣು ಅಗೆಯಬಾರದು. ನದಿಗಳತ್ತ ತೆರಳುವ ಜನ ಹಾಗೂ ನದಿ ಪರಿಸರದಲ್ಲಿ ವಾಸಿಸುವವರು ಎಚ್ಚರ ವಹಿಸಬೇಕು. ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಂಜಾತ್ ಮಾತನಾಡಿ, ತೋಟಗಳಲ್ಲಿ ಹಾಗೂ ಇತರ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಮನೆಗಳ ಸುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆ ಸಭೆ ನಡೆಸಬೇಕು. ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಪ್ರವಾಹ ಪೀಡಿತ ಮತ್ತು ಭೂಕುಸಿತ ಸ್ಥಳಗಳಲ್ಲಿ ವಾಸಿಸುವ ಜನರಿಗೆ ಸ್ಥಳಾಂತರಗೊಳಿಸುವ ಬಗ್ಗೆ ಮನವೊಲಿಸಿ ನೋಟಿಸ್ ಜಾರಿ ಮಾಡಿ ಸ್ವೀಕೃತಿ ಪಡೆಯಬೇಕು. ಜಿಲ್ಲಾಧಿಕಾರಿ ಆದೇಶದಂತೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಪಾಯದ ಸಂದರ್ಭ ತಕ್ಷಣ ಸೇವೆಗೆ ಸಿದ್ಧರಿರಬೇಕು ಎಂದು ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಪಿಡಬ್ಲ್ಯೂಡಿ ಎಇಇ ಬಕಪ್ಪ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು ಹಾಗೂ ಗ್ರಾಮ ಕರಣಿಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-29-723559129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.