ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಬಿಜೆಪಿ ವಿರೋಧ

Published 17 ಜೂನ್ 2023, 12:54 IST
Last Updated 17 ಜೂನ್ 2023, 12:54 IST
ಅಕ್ಷರ ಗಾತ್ರ

ಬೆಳ್ತಂಗಡಿ: ಕರ್ನಾಟಕ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿಜೆಪಿ ಆಡಳಿತ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ತೀರ್ಮಾನವನ್ನು ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿಯ ಬೆಳ್ತಂಗಡಿ ಮಂಡಲ ಹೇಳಿದೆ.

ಯಾರದೋ ಓಲೈಕೆಗಾಗಿ ಈ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಂಡಂತಿದೆ. ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ನಿರ್ಧಾರ ಧಾರ್ಮಿಕ ಮತಾಂತರ ನಿಷೇಧಿಸುವ ಸುಪ್ರೀಂಕೋರ್ಟ್‌ ತೀರ್ಪಿಗೆ ವಿರುದ್ಧವಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬದಲಾವಣೆ ಮಾಡಿ ಎಂದು ಅಲ್ಪಸಂಖ್ಯಾತರು ಕೇಳದಿದ್ದರೂ ಹಟಕ್ಕೆ ಬಿದ್ದಂತೆ ರಾಷ್ಟ್ರೀಯತೆ ವಿಚಾರಕ್ಕೆ ಮತ್ತು ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಘಾಸಿ ಮಾಡಲು ಮಾಡಲು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಹೆಡಗೇವಾರ್, ಸಾವರ್ಕರ್‌ ಪಠ್ಯ ಕೈ ಬಿಟ್ಟು ದ್ರೋಹ  ಎಸಗಲಾಗುತ್ತಿದೆ. ಇದನ್ನು ಖಂಡಿಸಿ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT