ಬೆಳ್ತಂಗಡಿ: ‘ತಾಲ್ಲೂಕಿನ 48 ಗ್ರಾಮ ಪಂಚಾಯಿತಿ ಮೂಲಕ ಜಲಜೀವನ್ ಮಿಷನ್ ಯೋಜನೆಯಲ್ಲಿ ₹ 87.50 ಕೋಟಿ ವೆಚ್ಚದ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಮಹಾತ್ವಕಾಂಕ್ಷೆಯ ಈ ಯೋಜನೆಯಲ್ಲಿ ಮನೆ, ಮನೆಗೆ ಕುಡಿಯುವ ನೀರನ್ನು ಒದಗಿಸುವುದು ಪ್ರಮುಖ ಉದ್ದೇಶವಾಗಿದೆ’ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ನಡೆದ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಬಹುಗ್ರಾಮ ಯೋಜನೆಯಲ್ಲಿ ಇಳಂತಿಲದಿಂದ ಆರಂಭಗೊಂಡು 13 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯವ ನೀರನ್ನು ಒದಗಿಸುವ ಯೋಜನೆ ನಡೆಯುತ್ತಿದೆ. ಅಲಂಕಾರಿನಲ್ಲಿ ಆಗುತ್ತಿರುವ ಬಹುಗ್ರಾಮ ಯೋಜನೆಯಲ್ಲಿ 4 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಸಲಾಗುವುದು. ಉಳಿದ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಕಾಮಗಾರಿ ನಡೆಯುತ್ತಿದೆ. ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬ ನೀತಿ, ತಾಂತ್ರಿಕ ಸಮಸ್ಯೆ ಹಾಗೂ ಗುತ್ತಿಗೆದಾರರು ಸಮರ್ಪಕವಾಗಿ ಕಾಮಗಾರಿ ನಿರ್ವಹಿಸಲು ಆಗುತ್ತಿರುವ ತೊಂದರೆಗಳ ಅವಲೋಕನ ನಡೆಸಲಾಗುವುದು. ಕಾಲ ಮೀತಿಯಲ್ಲಿ ತಾಲ್ಲೂಕಿನಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿಭಾಗೀಯ ಎಂಜಿನಿಯರ್ ರಘುನಾಥ್ ಮಾತನಾಡಿ, ‘ಜಲಜೀವನ್ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರ ಶೇ 50 ಹಾಗೂ ರಾಜ್ಯ ಸರ್ಕಾರ ಶೇ 50 ಅನುದಾನ ನೀಡುತ್ತಿದ್ದು, ಬೆಳ್ತಂಗಡಿ ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ 71 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 21 ಕಾಮಗಾರಿಗಳು ಪೂರ್ಣಗೊಂಡಿವೆ. 59 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಆಗಬೇಕಿದ್ದು, 22 ಕಾಮಗಾರಿ ಪೂರ್ಣಗೊಂಡಿದೆ. 37 ಕಾಮಗಾರಿ ಪ್ರಗತಿಯಲ್ಲಿದೆ. ತಾಲ್ಲೂಕಿನಲ್ಲಿ ಮುಂದಿನ ಮಾರ್ಚ್ ಒಳಗೆ ಎಲ್ಲ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಗದೀಪ್ ಜೆ. ಪೂರಕ ಮಾಹಿತಿ ನೀಡಿದರು.

ಪ್ರತಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದ ಕಾಮಗಾರಿಗಳ ಪ್ರಗತಿಯ ವಿವರ, ಬಾಕಿ ಕಾಮಗಾರಿ ಹಾಗೂ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಕಾಮಗಾರಿ ಬಾಕಿಯಾಗಿರುವ ಬಗ್ಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದ ಶಾಸಕ, ಮಾರ್ಚ್ 15ರ ಒಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಕೆಲವು ಕಡೆ ಎರಡು ವರ್ಷ ಕಳೆದರೂ, ಪೈಪ್ಲೈನ್ ಮಾಡದ ಹಾಗೂ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳದ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.